Friday, November 14, 2025

Latest Posts

ದೆಹಲಿಗಿಂತ ಬೆಂಗಳೂರಿನ ಮೆಟ್ರೋ ದರ ಹೆಚ್ಚು!

- Advertisement -

ಪ್ರತಿದಿನ ಸುಮಾರು 10 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರಿನ ನಮ್ಮ ಮೆಟ್ರೋ, ದೇಶದಲ್ಲೇ ಅತ್ಯಂತ ದುಬಾರಿ ಎನಿಸಿದೆ. ಇತ್ತೀಚೆಗೆ ನಮ್ಮ ಮೆಟ್ರೋ ದರ ಸುಮಾರು 25 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಇದನ್ನ ಯಾರು ಸಹಿಸುತ್ತಾರೆ ಅಂತಾ, ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ.

ಮೆಟ್ರೋದಲ್ಲಿ ಐಟಿ ಬಿಟಿ ವಲಯದವರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಸಂಚರಿಸುತ್ತಾರೆ. ಬಿಎಂಆರ್‌ಸಿಎಲ್ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸಿದ್ದರಿಂದ, ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಆಗಿದೆ. ನಮ್ಮ ಸರ್ಕಾರ ಶೇಕಡ 136ರಷ್ಟು ದರ ಹೆಚ್ಚಳ ಮಾಡಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ದೆಹಲಿ ಮೆಟ್ರೋ ದರ ಗರಿಷ್ಠ 4 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ದರ ಇಳಿಕೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು.

ಒಬ್ಬ ಸಾಮಾನ್ಯ ಮೆಟ್ರೋ ಬಳಕೆದಾರ, ತನ್ನ ನಿವಾಸದಿಂದ ಕೆಲಸಕ್ಕೆ 25 ಕಿಲೋ ಮೀಟರ್‌ಗಿಂತ ಹೆಚ್ಚು ದೂರ ಪ್ರಯಾಣಿಸಿದರೆ, ಪ್ರತಿ ಪ್ರಯಾಣಕ್ಕೆ ಸುಮಾರು 90 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇದು ಮೆಟ್ರೋ ತಲುಪುವುದಕ್ಕೆ ಮತ್ತು ಮೆಟ್ರೋ ಇಳಿದ ನಂತರದ ಪ್ರಯಾಣದ ಹೆಚ್ಚುವರಿ ವೆಚ್ಚಗಳನ್ನು ಹೊರತುಪಡಿಸಿದ ಲೆಕ್ಕ.

 

ಇಷ್ಟೊಂದು ದುಬಾರಿ ದರ ಹೆಚ್ಚಳವನ್ನು, ಯಾವ ಆಧಾರದ ಮೇಲೆ ಜಾರಿಗೆ ತರಲಾಯಿತು. ಮೆಟ್ರೋ ದರ ಹೆಚ್ಚಳ ವಿಚಾರವಾಗಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದೇನೆ. ಶುಲ್ಕ ನಿಗದಿ ಸಮಿತಿ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು, ವಿಚಾರಣೆ ವೇಳೆ ಹೈಕೋರ್ಟ್‌ಗೆ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಆದರೆ, ಈವರೆಗೆ ವರದಿಯನ್ನು ಬಿಎಂಆರ್‌ಸಿಎಲ್ ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್‌ 22ಕ್ಕೆ ಅಂತಿಮ ವಿಚಾರಣೆ ಇದೆ. ಹೀಗಾಗಿ ತಕ್ಷಣವೇ ವರದಿ ಬಿಡುಗಡೆ ಮಾಡಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅತ್ಯಂತ ಮುಖ್ಯ ಎಂದು ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದಾರೆ.

- Advertisement -

Latest Posts

Don't Miss