ಧರ್ಮಸ್ಥಳ ಪ್ರಕರಣದ ಬಗ್ಗೆ, ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಯಾಗ್ತಿದೆ. ಈ ವಿಚಾರ ಕೇಂದ್ರ ಸರ್ಕಾರದ ಅಂಗಳ ಮುಟ್ಟಿದ್ದು, ಎನ್‌ಐಎ ತನಿಖೆಗೆ ಆಗ್ರಹ ಹೆಚ್ಚಾಗ್ತಿದೆ. ರಾಜ್ಯದ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಾಗೂ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ರಾಜ್ಯ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಧಾರ್ಮಿಕ ಕ್ಷೇತ್ರಗಳ ಮುಖಂಡರು, ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ನಡೆಸಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಮಾವೇಶ ನಡೆದಿದೆ. ಇದರಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೂಡ ಭಾಗಿಯಾಗಿದ್ರು. ಪ್ರಮುಖವಾಗಿ 8 ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಲಾಗಿದೆ. ಆ 8 ನಿರ್ಣಯ ಯಾವುದು ಅಂತ ನೋಡೋದಾದ್ರೆ..
ನಂಬರ್ 1) ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರದ ಗೃಹ ಸಚಿವರಿಗೆ ಮನವಿ
ನಂಬರ್ 2) ಯ್ಯೂಟ್ಯೂಬರ್‌ಗಳ ವಿರುದ್ಧ ಮತ್ತು ಯುಟ್ಯೂಬ್ ಚ್ಯಾನಲ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ
ನಂಬರ್ 3) SIT ರಚಿಸಿದಕ್ಕೆ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಕೆ
ನಂಬರ್ 4) ಧರ್ಮಸ್ಥಳ ಮತ್ತು ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಸಾಮಾಜಿಕ ಜಾಲತಾಣ ಮೂಲಕ ನಡೆಯುತ್ತಿರುವ ಸುಳ್ಳು ಪ್ರಚಾರಕ್ಕೆ ಖಂಡನೆ ವ್ಯಕ್ತವಾಗಿದೆ.
ನಂಬರ್ 5) ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಮಾಡುವ ವ್ಯಕ್ತಿಗಳು ಮತ್ತು ಹಿಂದೆ ನಿಂತು ಸಹಕಾರ ನೀಡುತ್ತಿರುವ ವ್ಯಕ್ತಿ, ಸಂಘ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯ
ನಂಬರ್ 6) ಶ್ರದ್ದಾ ಕೇಂದ್ರಗಳ ವಿರುದ್ಧ, ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತು ಧಾರ್ಮಿಕ ಮುಖಂಡರ ವಿರುದ್ಧ ವ್ಯವಸ್ಥಿತ ಷಡ್ಯಂತ್ರಗಳು ನಡೆದರೆ, ಎಲ್ಲಾ ಧಾರ್ಮಿಕ ಮುಖಂಡರು ಸಂಘಟಿತರಾಗಿ, ಸಮರ್ಥ ಯೋಜನೆಯನ್ನು ರೂಪಿಸಿ, ಅದರ ವಿರುದ್ಧ ಹೋರಾಡಲು ನಿರ್ಣಯ ಕೈಗೊಳ್ಳಲಾಗಿದೆ.
ನಂಬರ್ 7) ಸಂಘಟನಾ ದೃಷ್ಟಿಯಿಂದ ಧರ್ಮ ಜಾಗೃತಿ ಸಮಿತಿಯನ್ನು ಇನ್ನಷ್ಟು ಬಲಪಡಿಸಿ, ವರ್ಷಕ್ಕೆ ಒಂದು ಬಾರಿಯಾದರೂ ಈ ರೀತಿಯ ಸಮಾವೇಶವನ್ನು ಆಯೋಜಿಸಿ ಸೂಕ್ತ ಕಾರ್ಯಯೋಜನೆಗಳನ್ನು ರೂಪಿಸಲು ನಿರ್ಣಯ
ನಂಬರ್ 8) ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ದೃಢವಾಗಿ ನಿಂತು ಧರ್ಮ ಸಂರಕ್ಷಣೆ ಮಾಡಲು ಕಟಿಬದ್ಧರಾಗಿರುತ್ತೇವೆ ಎಂಬ ತೀರ್ಮಾನ
ಒಟ್ಟು 8 ಮಹತ್ವದ ನಿರ್ಣಯಗಳನ್ನು ಧರ್ಮ ಜಾಗೃತಿ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದೆ. ಧಾರ್ಮಿಕ ಮುಖಂಡರೆಲ್ಲಾ ಈ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.