ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿರುವ ಪುಟೀನ್, ಆದಷ್ಟು ಬೇಗ ಈ ಲಸಿಕೆ ಸಾರ್ವಜನಿಕರಿಗೆ ಸಿಗುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈ ಲಸಿಕೆ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕೊರೊನಾ ಗುಣಮುಖವಾಗಿಸುತ್ತದೆಯಂತೆ.

ಭಾರತದ ಪುರಾಣಪ್ರಸಿದ್ಧ ದೇವಾಲಯ ತಿರುಪತಿಯಲ್ಲಿ 700ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದ ಸಿಬ್ಬಂದಿಗಳಲ್ಲಿ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಭಾರತದಲ್ಲಿ ಒಂದು 22 ಲಕ್ಷ ಕೊರೊನಾ ಕೇಸ್ ಕಂಡುಬಂದಿದೆ.
ನವೆಂಬರ್ 16ರಿಂದ ಶಬರಿಮಲೆಯಲ್ಲಿ ದೇವಸ್ಥಾನ ತೆರೆಯಲಿದ್ದು, ದೇವರ ದರ್ಶನ್ಗೆ ಕೋವಿಡ್ 19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ದೇವರ ದರ್ಶನವಾಗಬೇಕಾದರೆೆ ರಿಪೋರ್ಟ್ ತೋರಿಸಲೇಬೇಕೆಂದು ರೂಲ್ಸ್ ಮಾಡಲಾಗಿದೆ. ಕೇರಳ ಸಚಿವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಾಕಿಂಗ್ಗೆ ಹೋಗುತ್ತಿದ್ದ ವೇಳೆ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ಮಾಡಿ, ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದ ಭಾಗ್ಪತ್ನ ಚಪ್ರೂಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಿಜೆಪಿ ನಾಯಕ ಸಂಜಯ್ ಖೂಖರ್ ಎಂಬುವವರು ತಮ್ಮದೇ ಜಮೀನಿನಲ್ಲಿ ವಾಕಿಂಗ್ ಮಾಡುತ್ತಿದ್ದ ಸಮಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇನ್ನು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೇಶಾದ್ಯಂತ ಕೃಷ್ಣ ಜನ್ಮಾಷ್ಠಮಿ ಅದ್ಧೂರಿಯಾಗಿ ನಡೆದಿದ್ದು, ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲೂ ಕೂಡ ಗೋಕುಲಾಷ್ಠಮಿಯನ್ನ ಸಂಭ್ರಮದಿಂದ ಆಚರಿಸಲಾಯಿತು. ಕೊರೊನಾ ಇರುವ ಕಾರಣಕ್ಕೆ ಭಕ್ತರಿಗೆ ಪ್ರವೇಶ ನಿರ್ಭಂದಿಸಿದ ಇಸ್ಕಾನ್, ಆನ್ಲೈನ್ ಮೂಲಕ ಪೂಜೆ ವೀಕ್ಷಿಸಲು ಅನುವು ಮಾಡಿಕೊಟ್ಟಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




