Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




