ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್ಐಆರ್ ದಾಖಲಾಗಿದೆ.
ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ಸಂದರ್ಭದಲ್ಲಿ ಜ್ಯೋತಿ ಕೂಡ ಲಾಠಿ ಚಾರ್ಜ್ಗೆ ಗುರಿಯಾಗಿ, ನೋವಿನಲ್ಲಿ ನಡು ರಸ್ತೆಯಲ್ಲಿ ಕಿರುಚಾಡುತ್ತಾ, ಭಾವುಕವಾಗಿ ಪ್ರತಿಕ್ರಿಯಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈಗ ಮದ್ದೂರು ಇನ್ಸ್ಪೆಕ್ಟರ್ ಶಿವಕುಮಾರ್ ಅವರ ದೂರು ಆಧಾರವಾಗಿ ಈ ಪ್ರಕರಣ ದಾಖಲಾಗಿದೆ.
ಜ್ಯೋತಿ ಮದ್ದೂರಿನ ಶಿವಪುರದ ನಿವಾಸಿಯಾಗಿದ್ದು, ವಿವಾಹಿತೆಯಾಗಿದ್ದಾರೆ. ಮಕ್ಕಳು ಸಹ ಇದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಕ್ರಿಯಾಶೀಲತೆ ಹಾಗೂ ವಿರೋಧಾತ್ಮಕ ಹೇಳಿಕೆಗಳ ಬಗ್ಗೆ ಪೊಲೀಸ್ ಇಲಾಖೆ ಗಂಭೀರ ಗಮನ ಹರಿಸಿದೆ. ಈಗ ಎಫ್ಐಆರ್ ದಾಖಲಿಸಲಾಗಿದೆ.
ವರದಿ : ಲಾವಣ್ಯ ಅನಿಗೋಳ




