Hubli News: ಹುಬ್ಬಳ್ಳಿ: ಹುಬ್ಬಳ್ಳಿ ಜಿಮ್ ಖಾನ ಕ್ಲಬ್‌ನಲ್ಲಿ ಸಂಸದರ ಕ್ರೀಡಾ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಟಗಾರರ ಜರ್ಸಿ ಹಾಗೂ ಕಾರ್ಯಕ್ರಮದ ಟ್ರೈಲರ್ ಬಿಡುಗಡೆ ಮಾಡಿದರು.
ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಹಾಗೂ ಪ್ರಹ್ಲಾದ್ ಜೋಶಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೇಸಿಯ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ ನಲ್ಲಿ ಈ ಕ್ರೀಡೆಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ್, ಉಪ ಮೇಯರ್ ಸಂತೋಷ ಚೌಹ್ವಾಣ್ ಭಾಗಿಯಾಗಿದ್ದರು.
ಇನ್ನು ಇದೇ ವೇಳೆ ಮಾತನಾಡಿರುವ ಪ್ರಹ್ಲಾದ್ ಜೋಶಿ, ಹಾಸನ ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಸನದ ಪ್ರಕರಣ ಅತ್ಯಂತ ದುರ್ದೈವ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ..ಗಾಯಗಳು ಬೇಗ ಗುಣಮುಖವಾಗಲಿ. ಮೆರವಣಿಗೆ ನಡೆಯುತ್ತಿದ್ದಾಗ ಯಾಕೆ ಟ್ರಾಫಿಕ್ ಡೈವರ್ಟ್ ಮಾಡಿಲ್ಲ..? ಇಷ್ಟು ದೊಡ್ಡ ಮೆರವಣಿಗೆ ನಡೆಯುತ್ತಿದ್ದಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಯಾಕೆ ಅನುಸರಿಸಿಲ್ಲ…? ಎಂದು ಪ್ರಶ್ನಿಸಿರುವ ಜೋಶಿ, ಘಟನೆ ಬಗ್ಗೆ ಪ್ರಧಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ಪರಿಹಾರ ನಿಧಿಯಿಂದ ಪರಿಹಾರ ಸಹ ಘೋಷಣೆ ಮಾಡಿದ್ದಾರೆ ಎಂದು ಜೋಶಿ ಹೇಳಿದ್ದಾರೆ.




