Hubli News: ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕಸಗೂಡಿಸುವ ಮೂಲಕ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಿಂದ ಚಾಲನೆ ನೀಡಿದ್ದು, ಕಸಗೂಡಿಸುವ ಮೂಲಕ ಸೇವಾ ಸಮರ್ಪಣೆ ಮಾಡಿದ್ದಾರೆ.
ಇನ್ನೂ ಕೇಂದ್ರ ಸಚಿವರಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದು, ವಿನೂತನ ರೀತಿಯಲ್ಲಿ ಜನ್ಮದಿನದ ಆಚರಣೆ ಮಾಡಲಾಯಿತು.




