ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ತಮ್ಮ 75ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇವತ್ತು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವೋಟ್ ಚೋರಿಯ ಗಂಭೀರ ಆರೋಪ ಮಾಡಿದೆ. ಇದೇ ವಿಚಾರವಾಗಿ ಇಂದು ರಾಹುಲ್ ಗಾಂಧಿ, ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕಳೆದ ಆಗಸ್ಟ್ 7ರಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ವಿವರಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದರು.
ಇವತ್ತಿನ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಹೈಡ್ರೋಜನ್ ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಬಿಹಾರದಲ್ಲಿ ನಡೆದ ವೋಟ್ ಅಧಿಕಾರ ಯಾತ್ರೆಯ ಕೊನೆ ದಿನ, ಕಾಂಗ್ರೆಸ್ ದೊಡ್ಡ ಹೈಡ್ರೋಜನ್ ಬಾಂಬ್ ಸಿಡಿಸಲಿದೆ. ಅದು ಮತಗಳ್ಳತನದ ಹೈಡ್ರೋಜನ್ ಬಾಂಬ್ ಎಂದು ಹೇಳಿದ್ದರು. ಇದಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ದೇಶಕ್ಕೆ ಮುಖ ತೋರಿಸಲು ಯೋಗ್ಯರು ಆಗಿರುವುದಿಲ್ಲ ಅಂತಾ ರಾಹುಲ್ ಗಾಂಧಿ ಹೇಳಿದ್ರು. ಹೀಗಾಗಿ ರಾಹುಲ್ ಗಾಂಧಿ ಅವರ ಇಂದಿನ ಸುದ್ದಿಗೋಷ್ಠಿ ಬಹಳ ಮಹತ್ವ ಪಡೆದುಕೊಂಡಿದೆ.
ರಾಹುಲ್ ಗಾಂಧಿ ಅವರು ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಬಗ್ಗೆ ಮತ್ತಷ್ಟು ಮಾಹಿತಿ ನೀಡಲಿದ್ದಾರಾ? ಅಥವಾ ಬೇರೆ ಯಾವುದೇ ರಾಜ್ಯಗಳಿಗೆ ಸಂಬಂಧಿಸಿದ ವೋಟ್ ಚೋರಿಯ ಬಾಂಬ್ ಸಿಡಿಸಲಿದ್ದಾರಾ ಅನ್ನುವ ಕುತೂಹಲ ಮೂಡಿಸಿದೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ಕುರಿತು ಕಾಂಗ್ರೆಸ್ ವಕ್ತಾರ ಪವನ್ ಖೇರಾಮ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.




