Tuesday, October 14, 2025

Latest Posts

ಸರ್ಕಾರದ ಜಾತಿಗಣತಿ ವಿರುದ್ಧ ಹೈಕೋರ್ಟ್‌ಗೆ PIL

- Advertisement -

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.

ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ ಹಲವರು, ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಜಾತಿ ಮತ್ತು ಉಪಜಾತಿಗಳ ನಡುವೆ ಎತ್ತಿ ಕಟ್ಟಲಾಗ್ತಿದೆ. 15 ದಿನಗಳಲ್ಲಿ ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ದಸರಾ ರಜೆ ದಿನಗಳಲ್ಲಿ ಜಾತಿ ಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾಗ ಗಣತಿ ಸರಿಯಲ್ಲ. ಸರ್ಕಾರ 1,500 ಉಪಜಾತಿಗಳಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಹೀಗಾಗಿ ಜಾತಿ ಜನಗಣತಿ ರದ್ದು ಮಾಡಿ ಅಂತಾ, ಮನವಿ ಮಾಡಿದ್ದಾರೆ.

ಸರ್ಕಾರದ ಪಟ್ಟಿಯಲ್ಲಿರುವ ಕೆಲ ಜಾತಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಏಕೆಂದ್ರೆ, ಈ ಪಟ್ಟಿಯಲ್ಲಿ ಕೆಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಅಂತಾ ನಮೂದಿಸಲಾಗಿದೆ. ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ನೇಕಾರ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ವಿಶ್ವಕರ್ಮ ಬ್ರಾಹ್ಮಣ ಕ್ರಿಶ್ಚಿಯನ್ ಅಂತಾ ಉಲ್ಲೇಖವಿದೆ. ಇದು ಹಲವು ಜಾತಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಜಾತಿಗಳ ನಡುವೆ ಕ್ರಿಶ್ಚಿಯನ್ ನುಗ್ಗಿಸುವ ಹುನ್ನಾರ ನಡೀತಿದೆ. ಇದರ ವಿರುದ್ಧ ಹೋರಾಡಲು, ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಕರೆ ಕೊಟ್ಟಿದೆ.

- Advertisement -

Latest Posts

Don't Miss