Tuesday, September 23, 2025

Latest Posts

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ.

ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ಕರ್ನಾಟಕದ ಪರಿಸ್ಥಿತಿ, ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಪಕ್ಷದ ಭವಿಷ್ಯ ತಂತ್ರಗಳನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಿಂದ ಬೆಂಗಳೂರಿಗೆ ವಾಪಸಾದ ನಂತರ ಸೆ. 23 ಪಾಟ್ನಾದತ್ತ ಪ್ರಯಾಣ ಬೆಳೆಸಲಿದ್ದಾರೆ. ಕಾಂಗ್ರೆಸ್ ವರ್ಲ್ಡ್ ಕಮಿಟಿ ಸಭೆಯಲ್ಲಿ ಸಿಎಂ ಜೊತೆ ಅವರು ಭಾಗವಹಿಸಲಿದ್ದಾರೆ.

ಕರ್ನಾಟಕದ ಇಬ್ಬರು ಪ್ರಮುಖ ನಾಯಕರು ಈ ರಾಷ್ಟ್ರೀಯ ಸಭೆಯಲ್ಲಿ ಸಕ್ರಿಯ ಪಾಲ್ಗೊಳ್ಳುತ್ತಿರುವುದು ರಾಜ್ಯದ ನಾಯಕತ್ವದ ಮಹತ್ವವನ್ನೂ, ಕಾಂಗ್ರೆಸ್ ಪಕ್ಷದ ಭವಿಷ್ಯದ ತಂತ್ರ ರಚನೆಯಲ್ಲಿ ಅವರ ಪಾತ್ರವನ್ನೂ ಸ್ಪಷ್ಟಪಡಿಸುತ್ತಿದೆ. ಈ ಪ್ರವಾಸವನ್ನು ಕಾಂಗ್ರೆಸ್‌ ರಾಷ್ಟ್ರೀಯ ನಾಯಕತ್ವದೊಂದಿಗೆ ಸಮನ್ವಯ ಸಾಧಿಸಲು, ಹಾಗೂ ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ರೂಪಿಸಲು ತೆಗೆದುಕೊಳ್ಳುತ್ತಿರುವ ತಜ್ಞ ಚಲನವಲನವೆಂದು ವಿಶ್ಲೇಷಿಸಲಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss