ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಸದಸ್ಯರು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ತತ್ವಕಾಡುತ್ತಿದ್ದಾರೆ. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಹೇಳಿದ್ರು ಕ್ಯಾರೇ ಅಂತಿಲ್ಲ. ಯಾವ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಸಮಸ್ಯೆ ಬಗ್ಗೆ ಹೇಳಿದ್ರೂ ಕೇಳುವವರೇ ಇಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಎಲ್ಲಿದ್ದಾರೆ? ಏನು ಮಾಡ್ತಿದ್ದಾರೆ? ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಮಾಜ ಸೇವಕ ಶ್ರೀಕಾಂತ್ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸಚಿವರ ತವರು ಪ್ರದೇಶದಲ್ಲೇ ಇಂತಹ ಪರಿಸ್ಥಿತಿ ಉಂಟಾಗಿರುವುದರಿಂದ ಜನರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ವರದಿ : ಲಾವಣ್ಯ ಅನಿಗೋಳ