ಕನ್ನಡದ ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕವೇ ಶೋಕದಲ್ಲಿ ಮುಳುಗಿದೆ. ಭೈರಪ್ಪನವರ ಕಾದಂಬರಿಗಳನ್ನು ಪ್ರೀತಿಸುತ್ತಿದ್ದ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ.
ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಹಾಜರಾಗಿ ಶ್ರದ್ಧಾಂಜಲಿ ಸಲ್ಲಿಸಿದರು. ಕಾದಂಬರಿಗಳ ದೈತ್ಯ ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲಿ ಭೈರಪ್ಪನವರ ಸ್ಮಾರಕ ನಿರ್ಮಿಸಲಾಗುವುದು ಎಂದು ಸಿಎಂ ಘೋಷಿಸಿದರು.
ಭೈರಪ್ಪನವರ ಪಾರ್ಥಿವ ಶರೀರವನ್ನು ಇಂದು ಮೈಸೂರಿಗೆ ರವಾನೆ ಮಾಡಲಾಗುತ್ತಿದೆ. ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದ್ದು, ಪುತ್ರ ರವಿಶಂಕರ್ ಲಂಡನ್‌ನಿಂದ ಆಗಮಿಸಿದ ಬಳಿಕ, ಸೆಪ್ಟೆಂಬರ್ 26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ