ಪಂಚಭೂತಗಳಲ್ಲಿ ಲೀನರಾದ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ

ಮೈಸೂರು:ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್‌.ಎಲ್.‌ ಭೈಪಪ್‌ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಅನಾರೋಗ್ಯ ಅಂತಾ ಆಸ್ಪತ್ರೆ ಸೇರಿದ್ದ ಸಾಹಿತಿ ಎಸ್.ಎಲ್‌ ಭೈರಪ್ಪ ಹೃದಯಾಘಾತದಿಂದ ಸೆ.24 ರಂದು ವಿಧಿವಸರಾದರು. ಸದ್ಯ ಮೈಸೂರಿನ ಚಾಮುಂಡಿ ತಪ್ಪಲಿನ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದ್ದ, ಪಂಚಭೂತಗಳಲ್ಲಿ ಲೀನರಾಗಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

ಅಂತ್ಯಸಂಸ್ಕಾರದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​​ ಜೋಶಿ ಕೇಂದ್ರದ ಪ್ರತಿನಿಧಿಯಾಗಿ ಭಾಗವಹಿಸಿ ಕೇಂದ್ರ ಸರ್ಕಾರದ ಪರವಾಗಿ ಅಂತಿಮ ನಮನ, ಗೌರವಾರ್ಪಣೆ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

About The Author