Tuesday, October 14, 2025

Latest Posts

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

- Advertisement -

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು.

ಇದೀಗ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ಬೆಂಗಳೂರು ನಗರ ಯೋಜನೆಗೆ ಸಂಬಂಧಿಸಿದ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ಪಾಲಿಕೆಗಳು ಮತ್ತು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟ, 11 ನಗರ ಸ್ಥಳೀಯ ಸಂಸ್ಥೆಗಳನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಖಾತೆ ಹಾಗೆಯೇ ಉಳಿದಿದ್ರೂ‌, ಅವರ ಇಲಾಖೆಯ ಅಧೀನದಲ್ಲಿದ್ದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳನ್ನು, ಅವರ ಖಾತೆಯಿಂದ ಕೈಬಿಡಲಾಗಿದೆ. ಇವುಗಳ ಆಡಳಿತ ಜವಾಬ್ದಾರಿ ಮಾತ್ರ ಡಿ.ಕೆ. ಶಿವಕುಮಾರ್‌ಗೆ ನೀಡಲಾಗಿದೆ.

ಸಿಎಂ ಸಲಹೆ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.

- Advertisement -

Latest Posts

Don't Miss