ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ.

ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು, ಖಾಸಗಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿ, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಕೊತ್ತನೂರು ಮಂಜುನಾಥ್, ಅನಾಹುತ ನಡೆದ ಬಳಿಕವೂ ತಪ್ಪಿತಸ್ಥ ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳದೇ ಇರುವುದು, ಅಧಿಕಾರಿಗಳ ನಿರ್ಲಕ್ಷತೆಗೆ ಸಾಕ್ಷಿಯಾಗಿದೆ. ಒಬ್ಬರ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದರೆ, ಮತ್ತೊಂದು ಪ್ರಕರಣ ಮರುಕಳಿಸುತ್ತಿರಲಿಲ್ಲ. ಮೊದಲು ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಿ ಎಂದು ಕಟ್ಟಪ್ಪಣೆ ಮಾಡಿದ್ರು.

About The Author