ಬಿಜೆಪಿ ಜನತೆಗೆ ಕ್ಷಮೆ ಕೇಳಲಿ ಅಂತ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ

ಕೇಂದ್ರ ಸರ್ಕಾರ ಮತ್ತು ಬಿಜೆಪಿ GST ಮೂಲಕ ವರ್ಷಗಳಿಂದ ಜನರನ್ನು ಸುಲಿಗೆ ಮಾಡಿದೆ. ಇದೀಗ ಅದೇ GST ದರ ಇಳಿಕೆಗೆ ಸಂಭ್ರಮಾಚರಣೆ ಮಾಡುತ್ತಿರುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಈಗದೇಶದ ಜನರ ಕ್ಷಮೆ ಕೋರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. GST ಮೂಲಕ ಇಲ್ಲಿಯವರೆಗೆ ಜನರನ್ನು ಸುಲಿಗೆ ಮಾಡಿದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ದೇಶದ ಜನರ ಕ್ಷಮೆ ಕೋರಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.

ಜಿಎಸ್‌ಟಿ ಇಳಿಕೆಗೆ ಕೇಂದ್ರ ಸರ್ಕಾರ ಸಂಭ್ರಮಾಚರಣೆ ಮಾಡುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ ಮೂಲಕ ಅಮಾಯಕ ಜನರಿಂದ ವರುಷಗಳ ಕಾಲ ಸುಲಿಗೆ ಮಾಡಲಾಗಿದೆ. ಅದನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮರೆತಿದೆ. ಈಗ ಜಿಎಸ್‌ಟಿ ಪ್ರಮಾಣ ಕಡಿಮೆ ಮಾಡಿ ಸಂಭ್ರಮಾಚರಣೆ ಮಾಡುವ ಮೂಲಕ ಪ್ರಚಾರ ಪಡೆಯುವ ಬಿಜೆಪಿಯ ನೈತಿಕತೆ ಬಗ್ಗೆ ಹೇಳಲು ಪದಗಳು ಸಾಲುತ್ತಿಲ್ಲ.

ಅಲ್ಲದೆ, ಇನ್ನಾದರೂ ಇಲ್ಲದ ಮಾಹಿತಿಯನ್ನು ಹೇಳಿ ಅಪಪ್ರಚಾರ ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯುವ ದುಸ್ಸಾಹಸಕ್ಕೆ ಇನ್ನಾದರೂ ಪೂರ್ಣವಿರಾಮ ಹಾಬೇಕು ಎಂದು ಹೇಳಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಯಾವುದೇ ದೇವಸ್ಥಾನಗಳಲ್ಲಿ ಸೇವಾ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ. 2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು.

ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕಟೀಲು ದೇವಸ್ಥಾನದ ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿದ್ದು, ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ. ಹಾಗಾಗಿ ಅವರೇ ದರ ಪರಿಷ್ಕರಣೆ ಮಾಡಿದ್ದಾರೆ ಎಂದು ತಿಳಿಸಿದರು.

ವರದಿ : ಲಾವಣ್ಯ ಅನಿಗೋಳ

About The Author