Sunday, October 5, 2025

Latest Posts

‘ಶಕ್ತಿ’ ಚಂಡಮಾರುತ ಬರ್ತಿದೆ.. ರಾಜ್ಯಕ್ಕೆ ಡೇಂಜರ್ ಅಲರ್ಟ್‌

- Advertisement -

ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ ಡೇಂಜರ್‌ ಅಲರ್ಟ್‌ ನೀಡಿದೆ. ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ‘ಶಕ್ತಿ’ ಚಂಡಮಾರುತದ ಪ್ರಭಾವದಿಂದಾಗಿ, ಕರ್ನಾಟಕದಲ್ಲಿ ಮಳೆಯಾಗಲಿದೆಯಂತೆ. ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಅಕ್ಟೋಬರ್‌ 5ರಿಂದ 10ರವರೆಗೆ ರಣಭೀಕರ ಮಳೆ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ, ಮುಂದಿನ 2 ದಿನಗಳ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ ಪ್ರಕಾರ, ಮುಂಬರುವ ದಿನಗಳಲ್ಲಿ ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ, ಚದುರಿದ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.

ಬೆಳಗಾವಿ, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಕೊಪ್ಪಳ, ಬೆಂಗಳೂರು, ಮೈಸೂರು, ತುಮಕೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆಯಂತೆ.

ಇನ್ನು, ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಮಳೆಯಾಗುತ್ತಲೇ ಇದೆ. ಬಿಸಿಲಿನ ಮುಖವನ್ನೇ ಜನರು ನೋಡದಂತಾಗಿದೆ. ಇನ್ನೂ ಹಲವು ದಿನ ಮೋಡ ಕವಿದ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.

- Advertisement -

Latest Posts

Don't Miss