ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ ಪ್ರಕಾರ, ಪಕ್ಷದ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಯಾಗಲಿದೆ.
ಪಕ್ಷದ ಯುವ ನಾಯಕರಾಗಿರುವ ಹರ್ಷ, ಸಂಘಟನಾ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಚುನಾವಣಾ ತಂತ್ರ ರೂಪಿಸುವಲ್ಲಿ ಹಾಗೂ ಆಂತರಿಕ ಸಂಘಟನಾ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಜವಾಬ್ದಾರಿಯೊಂದಿಗೆ ರಾಜಕೀಯ ಪ್ರವೇಶಕ್ಕೂ ಹಾದಿ ಮಾಡಿಕೊಟ್ಟಂತಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ. 7ರಂದು ಈ ಘೋಷಣೆ ಮಾಡಿದ್ದಾರೆ. ವಾರ ರೂಂ ಘಟಕವು ಪಕ್ಷದ ಚುನಾವಣಾ ತಂತ್ರ ರೂಪಿಸುವುದು, ಪ್ರಚಾರ ಅಭಿಯಾನಗಳ ಯೋಜನೆ, ಸಾಮಾಜಿಕ ಮಾಧ್ಯಮ ತಂತ್ರ ಸಿದ್ಧತೆ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಸಂಪರ್ಕ ವ್ಯವಸ್ಥೆಗಳನ್ನು ಸಮನ್ವಯಗೊಳಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ