Tuesday, October 14, 2025

Latest Posts

ದೇಶಪಾಂಡೆಯವರ ಹೇಳಿಕೆಯಿಂದಲೇ ಕಾಂಗ್ರೆಸ್ ಹೇಗೆ ಸರ್ಕಾರ ನಡೆಸುತ್ತಿದೆ ಎಂದು ತಿಳಿಯುತ್ತದೆ: ನಿಖಿಲ್

- Advertisement -

Political News: ಕಾಂಗ್ರೆಸ್ ಹಿರಿಯ ನಾಾಯಕ ಆರ್‌.ವಿ.ದೇಶಪಾಂಡೆ ಅವರು ನಾನೇನಾದರೂ ಸಿಎಂ ಆಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರಲಿಲ್ಲ. ಇದರಿಂದ ಸಮಸ್ಯೆ ಹೆಚ್ಚು ಎಂದು ಹೇಳಿದ್ದರು. ಈ ಹೇಳಿಕೆ ವಿರೋಧ ಪಕ್ಷದವರಿಗೆ ಆಹಾರವಾಗಿದೆ.

ಈ ಹೇಳಿಕೆ ಬಗ್ಗೆ ಬಿಜೆಪಿ, ಜೆಡಿಎಸ್ ವ್ಯಂಗ್ಯವಾಡುತ್ತಿದ್ದು, ನಿಮ್ಮ ಪಕ್ಷದಲ್ಲೇ ಗ್ಯಾರಂಟಿ ಯೋಜನೆ ವಿರೋಧಿಗಳಿದ್ದಾರೆಂದು ಕಿಡಿಕಾರುತ್ತಿದ್ದಾರೆ. ಇದೀಗ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ವ್ಯಂಗ್ಯವಾಡಿದ್ದು, “ನಾನು ಮುಖ್ಯಮಂತ್ರಿ ಆಗಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ” ಎಂದು ಕಾಂಗ್ರೆಸ್ ಶಾಸಕರಾದ ಶ್ರೀ ಆರ್.ವಿ. ದೇಶಪಾಂಡೆ ಅವರು 5 ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದ್ದಾರೆ, ಅವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ₹4.5 ಲಕ್ಷ ಕೋಟಿಯ ಬಜೆಟ್ ನೀಡಿದ್ದೇವೆ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 55 ರಿಂದ 60 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎನ್ನುತ್ತಾರೆ ಆದರೆ ಸಮಪರ್ಕವಾಗಿ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾಗಿಲ್ಲ ಹಾಗೂ ರಾಜ್ಯದ ಅಭಿವೃದ್ಧಿ ಕೂಡ ಶೂನ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೇಗೆ ನಡೆಯುತ್ತಿದೆ ಎಂಬುದು ಹಿರಿಯರಾದ ಶ್ರೀ ಆರ್. ವಿ.ದೇಶಪಾಂಡೆ ಅವರ ಹೇಳಿಕೆಯಿಂದ ಅರ್ಥವಾಗುತ್ತದೆ ಎಂದು ನಿಖಿಲ್ ಹೇಳಿದ್ದಾರೆ.

ಅಲ್ಲದೇ ದೇಶಪಾಂಡೆ ಅವರು ನಿನ್ನೆ ಮ“ನ್ನೆ ಬಂದವರಲ್ಲ. ಬದಲಾಗಿ ಹಿರಿಯ ನಾಯಕರು. ಹಾಗಾಗಿ ಅವರ ಹೇಳಿಕೆ ಮೂಲಕವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವ ರೀತಿಯಾಗಿ ಆಡಳಿತ ನಡೆಸುತ್ತಿದೆ ಎಂದು ತಿಳಿಯಬೇಕಿದೆ ಎಂದು ನಿಖಿಲ್ ಕುಮಾರ್ ಹೇಳಿದ್ದಾರೆ.

- Advertisement -

Latest Posts

Don't Miss