Wednesday, October 15, 2025

Latest Posts

Tumakuru News: ಸಿಜೆಐ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -

Tumakuru News: ತುಮಕೂರು: ಸಿಜೆಐ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ‌ ಖಂಡಿಸಿ‌ ಸಂಶೋಧನೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

100ಕ್ಕೂ ಹೆಚ್ಚು ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು, ತುಮಕೂರು ವಿವಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದ್ದು, ಮಾರ್ಗ ಮಧ್ಯೆ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು..

ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಅವರು, ಸುಪ್ರಿಂ ಕೊರ್ಟ್ ನ್ಯಾಯಾಧೀಶರಾದ ಗವಾಯಿ ಯವರ ಮೇಲೆ ಶೂ ಎಸೆದಿರುವುದು ಖಂಡನೀಯ. ಈ ಅಮಾನವೀಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ವಿರುಧ್ಧ ಕಾನೂನು ಕ್ರಮ ಕೈಗೊಳ್ಳುಬೇಕು. ಸಿಜೆಐ ಮೇಲೆ ಶೂ ಎಸೆದಿರುವುದು ಅಕ್ಷಮ್ಯ ಅಪರಾಧ. ಸಂವಿಧಾನದ ಉನ್ನತ ಸ್ಥಾನಕ್ಕೆ ಮಾಡಿರುವ ಅಪಮಾನ ಎಂದು ಮನುವಾದಿಗಳ ವಿರುದ್ದ ವಿದ್ಯಾರ್ಥಿಗಳು ಹರಿಹಾಯ್ದಿದ್ದಾರೆ.

ಅಲ್ಲದೇ, ಇದೇ ವಿಚಾರಕ್ಕೆ ಬೆಂಬಲ ನೀಡಿದ್ದ ನಿವೃತ್ತ ಪೋಲೀಸ್ ಅಧಿಕಾರಿ ಭಾಸ್ಕರ್ ರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅಪರಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ.

- Advertisement -

Latest Posts

Don't Miss