Thursday, October 16, 2025

Latest Posts

ಸೈಕ್ಲೋನ್‌ ಪ್ರಭಾವ ಅ.20ವರೆಗೆ ರಾಜ್ಯಕ್ಕೆ ಮಳೆಯ ಎಚ್ಚರಿಕೆ!

- Advertisement -

ರಾಜ್ಯದಲ್ಲಿ ಮಳೆಗಾಲ ಮುಗಿದು ಚಳಿಗಾಲ ಹತ್ತಿರ ಬಂದರೂ ಸಹ ಮಳೆಯ ಅಬ್ಬರ ಮಾತ್ರ ಇನ್ನೂ ಮುಗಿಯುವಂತೆ ಕಾಣುತ್ತಿಲ್ಲ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ. ಅ.16 ರಿಂದ ಅಂದರೆ ಇಂದಿನಿಂದ ಮತ್ತೆ ಮಳೆರಾಯನ ಆರ್ಭಟ ಜೋರಾಗಲಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಅ.20ರವರೆಗೂ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಮುಂದಿನ ನಾಲ್ಕು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅಕ್ಟೋಬ‌ರ್ 18ರ ವರೆಗೆ ಮಳೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಅಕ್ಟೋಬರ್ 16 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗೆ ಅಕ್ಟೋಬರ್ 20ರ ವರೆಗೂ ರಾಜ್ಯದಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ಕಳೆದ ಒಂದು ವಾರದದಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss