Thursday, October 16, 2025

Latest Posts

ಆಹಾರವಿಲ್ಲದೇ ಸಾವಿರಾರು ಸಾವು : ಬೆಚ್ಚಿ ಬೀಳಿಸುತ್ತೆ CM ರಿಪೋರ್ಟ್‌ !

- Advertisement -

ಅಂಕಿ ಅಂಶದ ಸಮೇತ ಪ್ರತಿದಿನ ಆಹಾರ ಇಲ್ಲದೇ ಇಷ್ಟು ಮಂದಿ ಸಾಯತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ವಿರುದ್ದ ಕಿಡಿ ಕಾರಿದ ಸಿದ್ದರಾಮಯ್ಯ, ದೇಶದಲ್ಲಿ ಪ್ರತಿದಿನ ಆಹಾರ ಇಲ್ಲದೇ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂದು ಅಂಕಿ ಅಂಶಗಳ ಸಮೇತ ಲೆಕ್ಕ ಕೊಟ್ಟಿದ್ದಾರೆ.

ಜನರಿಗೆ ಆಹಾರ ಬೇಕು ಗಾಳಿ ಮಣ್ಣು ತಿಂದು ಬದುಕೋಕೆ ಆಗಲ್ಲ. ಹೀಗಾಗಿ ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾರುವವರ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ 19,700 ಮಂದಿ ಆಹಾರ ಆಹಾರ ಕೊರತೆಯಿಂದ ಸಾಯುತ್ತಿದ್ದಾರೆ. ಜಗತ್ತಿನಲ್ಲಿ ಪ್ರತಿ ನಾಲ್ಕು ಸೆಕೆಂಡ್‌ಗೆ ಒಬ್ಬ ವ್ಯಕ್ತಿ ಹಸಿವಿನಿಂದ ಸಾವನ್ನಪ್ಪುತ್ತಿದ್ದಾನೆ. ಈ ದುರಂತದ ಬಗ್ಗೆ ಜಾಗೃತಿಯನ್ನು ಮೂಡಿಸುವ ಜವಾಬ್ದಾರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿಹೇಳಿದ್ದಾರೆ.

ಕಾಳಸಂತೆಯಲ್ಲಿ ಅಕ್ಕಿಯಂತಹ ಆಹಾರ ಧಾನ್ಯಗಳನ್ನು ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ. ಇದು ಹೆದರಿಸಲು ಹೇಳುತ್ತಿಲ್ಲ, ಇದು ದಿಟ್ಟ ಕ್ರಮ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆಹಾರವು ಎಲ್ಲರಿಗೂ ಲಭ್ಯವಾಗಬೇಕು ಎಂಬುದು ಸರ್ಕಾರದ ಗುರಿಯಾಗಿದೆ. ಆದರೆ, ಈ ಕ್ರಮಗಳಿಂದ ಸಣ್ಣ ರೈತರಿಗೆ ತೊಂದರೆಯಾಗಬಾರದು ಎಂದು ಅವರು ಎಚ್ಚರಿಕೆ ವಹಿಸಿದ್ದಾರೆ. ದೊಡ್ಡ ಕಾರ್ಪೊರೇಟ್ ಕಂಪನಿಗಳು ಬೃಹತ್ ಪ್ರಮಾಣದಲ್ಲಿ ಬೆಳೆ ಉತ್ಪಾದಿಸುತ್ತವೆ. ಆದರೆ, ಸಣ್ಣ ಹಿಡುವಳಿದಾರರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಹೊಟೇಲ್‌ಗಳಲ್ಲಿ ಮತ್ತು ಮದುವೆ ಸಮಾರಂಭಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಆಹಾರ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಅವರು ಹೇಳಿದ್ದಾರೆ. ಆಹಾರವನ್ನು ಗೌರವಿಸುವ ಸಂಸ್ಕೃತಿಯನ್ನು ಬೆಳೆಸಬೇಕು. ಜನರು ಆಹಾರದ ಮೌಲ್ಯವನ್ನು ಅರಿತು, ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ. ಇನ್ನು ಆಹಾರ ಭದ್ರತಾ ಕಾಯ್ದೆಯ ಬಗ್ಗೆ ಮಾತನಾಡುವಾಗ ಸಿದ್ದರಾಮಯ್ಯ, ಈ ಕಾಯ್ದೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಂದಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss