ಬ್ಯಾನ್ ಬ್ಯಾನ್ ಆರ್‌ಎಸ್‌ಎಸ್.. ಭ್ರಷ್ಟ ಆರ್‌ಎಸ್‌ಎಸ್‌ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್‌ಎಸ್‌ಎಸ್ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು.
ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್‌ಎಸ್‌ಎಸ್ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ ಸಂದೇಶ, ಕರೆಗಳು ಬಂದಿದ್ವು. ಇದ್ರಿಂದ ರೊಚ್ಚಿಗೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ರು.
ಕೇಶವಕುಂಜ ಬಳಿಯ ಆರ್ ಎಸ್ ಎಸ್ ಕಚೇರಿ ಎದುರು, ಪ್ರತಿಭಟನೆಗೆ ಮುಂದಾಗಿದ್ರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಆರ್ ಎಸ್ ಎಸ್ ಕಚೇರಿಗೆ ತೆರಳುವ ಮಾರ್ಗವನ್ನೇ ಬಂದ್ ಮಾಡಿತ್ತು. ಇದರಿಂದಾಗಿ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ್ ನೇತೃತ್ವದಲ್ಲಿ, ನಗರದ ಗೋಕುಲ ರಸ್ತೆಯಲ್ಲೇ ಪ್ರತಿಭಟನೆಗೆ ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ನೂಕು ನುಗ್ಗುಲು ಉಂಟಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಕಾರ್ಯಕರ್ತರು, ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿದ್ರು.
ಬಳಿಕ, ಪೊಲೀಸ್ ವ್ಯಾನ್‌ನಲ್ಲಿ ಎಲ್ಲರನ್ನೂ ಹತ್ತಿಸಿಕೊಂಡು ಬೇರೆ ಕಡೆ ಕರೆದೊಯ್ಯಲಾಯ್ತು. ಇನ್ನು, ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳದಲ್ಲಿ, ಆರ್‌ಎಸ್‌ಎಸ್ ಕಚೇರಿ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.