Monday, October 20, 2025

Latest Posts

Political News: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಕಿದ್ದ ಧ್ವಜ ತೆರವು: ವಿಜಯೇಂದ್ರ ಆಕ್ರೋಶ

- Advertisement -

Political News: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಬ್ಯಾನ್ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆದರೆ ಇದೀಗ ಆರ್‌ಎಸ್‌ಎಸ್‌ನವರು ಸಚಿವರ ಕ್ಷೇತ್ರದಲ್ಲೇ ಪಥಂಚಲನ ಮಾಡಲು ನಿರ್ಧರಿಸಿದ್ದರು.

ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ ರಾತ್ರೋರಾತ್ರಿ ಕಾರ್ಯಕ್ರಮಕ್ಕಾಗಿ ಅಲಂಕಾರ ಮಾಡಲಾಗಿದ್ದ ಭಾಗವಧ್ವಜವನ್ನು ತೆರವು ಮಾಡಲಾಗಿದೆ.

ಈ ಸಂಬಂಧ ಕಾಂಗ್ರೆಸ್ ಸರ್ಕಾರ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಬೇಸರ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚಿತ್ತಾಪುರದಲ್ಲಿ ಪಾಳೇಗಾರಿಕೆ ರಾಜಕಾರಣ ಅಟ್ಟಹಾಸ ಮೆರೆಯುತ್ತಿದೆ, ಅಭಿವ್ಯಕ್ತಿ ಹಾಗೂ ವಾಕ್ ಸ್ವಾತಂತ್ರ್ಯವನ್ನು ದಮನ ಮಾಡಲು ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಆರ್‌ಎಸ್‌ಎಸ್‌ ಶತಮಾನ ಪೂರೈಸಿದ ಸಂಭ್ರಮ ಆಚರಿಸಲು ಸಂಘ ಹಾಗೂ ಹಿಂದೂ ಪರ ಸಂಘಟನೆಗಳು ನಿಯಮಾನುಸಾರ ಅನುಮತಿ ಪಡೆದು ಆಯೋಜಿಸಿದ್ದ ಸಂಘದ ಪಥಸಂಚಲನ ಕಾರ್ಯಕ್ರಮದ ಮೇಲೆ ಕೆಂಗಣ್ಣು ಬೀರಿರುವ ಸ್ಥಳೀಯ ಶಾಸಕರೂ ಆಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ದ್ವೇಷ ರಾಜಕಾರಣವನ್ನು ಮುಂದುವರೆಸಿದ್ದಾರೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿತ್ತಾಪುರದಲ್ಲಿ ನಿನ್ನೆ ತಡರಾತ್ರಿ ಪುರಸಭೆಯ ಸಿಬ್ಬಂದಿ ಸಂಘದ ಪಥಸಂಚಲನದ ಆಕರ್ಷಣೆಗಾಗಿ ಅನುಮತಿ ಪಡೆದು ಕಟ್ಟಲಾಗಿದ್ದ ಭಗವಾಧ್ವಜಗಳು, ಬಂಟಿಂಗ್, ಬ್ಯಾನರ್ ಗಳನ್ನು ಕಿತ್ತೆಸೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಆಚರಣೆಯನ್ನು ದುರುದ್ದೇಶ ಪೂರ್ವಕವಾಗಿ ತಡೆಯಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ವಿಜಯೇಂದ್ರ ಹೇಳಿದ್ದಾರೆ.
ಚಿತ್ತಾಪುರದಿಂದ ನಿಯಂತ್ರಿಸುತ್ತಿರುವ ರಿಪಬ್ಲಿಕ್ ಆಫ್ ಕಲಬುರಗಿಯನ್ನು ಧಿಕ್ಕರಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಲು ಬಿಜೆಪಿ ಜನರ ದನಿಯಾಗಿ ಹೋರಾಡಲಿದೆ. ಅಧಿಕಾರದ ಮದ ನೆತ್ತಿಗೇರಿಸಿಕೊಂಡಂತೆ ವರ್ತಿಸುತ್ತಿರುವ ಪ್ರಿಯಾಂಕ್ ಖರ್ಗೆ ಅವರೇ, ಈ ನೆಲದಲ್ಲಿ ‘ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ’ ಎಂಬ ವಾಸ್ತವಿಕ ಸತ್ಯ ನೆನಪಿರಲಿ ಎಂದು ವಿಜಯೇಂದ್ರ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ್ದಾರೆ.
- Advertisement -

Latest Posts

Don't Miss