Monday, October 20, 2025

Latest Posts

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

- Advertisement -

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ.

ನವೆಂಬರ್ 2ನೇ ವಾರದಲ್ಲಿ ಸಿಎಂ ಗುದ್ದಲಿ ಪೂಜೆ ಮಾಡಲಿದ್ದಾರೆ. ಎಐ ಆಧಾರಿತ ಶಿಕ್ಷಣ ನೀಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು. 6ನೇ ತರಗತಿಯಿಂದಲೇ ಸ್ಕಿಲ್​​​​ ಸ್ಕೂಲ್ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಒಟ್ನಲ್ಲಿ, ಸರ್ಕಾರಿ ಉದ್ಯೋಗದ ಕನಸು ಕಂಡು ಜಾತಕಪಕ್ಷಿಯಂತೆ ಕಾಯುತ್ತಿದ್ದ ಶಿಕ್ಷಕರಿಗೆ, ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ.

- Advertisement -

Latest Posts

Don't Miss