ಮಳೆಯ ಆರ್ಭಟದಿಂದ ಜನ ತತ್ತರಿಸಿ ಹೋಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ ಸಿಎಂ ಯಡಿಯೂರಪ್ಪನವರೇ..? ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಮಾಜಿ ಸಿಎಂ ಮನವಿ ಮಾಡಿದ್ದಾರೆ.
ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




