Sunday, October 26, 2025

Latest Posts

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಆಪ್ತರು, ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆಂದರೆ ತಮ್ಮ ಸಚಿವ ಸ್ಥಾನಗಳನ್ನು ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಕೆಲವು ಹಿರಿಯರು ರಾಜೀನಾಮೆ ನೀಡಲು ಸಿದ್ಧತೆ ವ್ಯಕ್ತಪಡಿಸಿರುವುದು ಗಮನಾರ್ಹ ಎಂದು ಮೂಲಗಳ ತಿಳಿಸಿವೆ .

ಸಂಪುಟ ಪುನರಚನೆ ಅಥವಾ ನಾಯಕತ್ವ ಬದಲಾವಣೆ ಅಗತ್ಯವಾದರೆ, ಸಿಎಂ ಮತ್ತು ಡಿಸಿಎಂ ಇಬ್ಬರೂ ಹೈಕಮಾಂಡ್ ಜೊತೆ ಸಮಾಲೋಚಿಸಿ ನಿರ್ಧರಿಸುತ್ತಾರೆ. ಸಂಪುಟದಿಂದ ಹೊರಗಿರುವವರಿಗೆ ಅವಕಾಶ ಕೊಡುವುದು ಸ್ವಾಭಾವಿಕ ನ್ಯಾಯ ಮತ್ತು ಕರ್ತವ್ಯವಾಗಿದೆ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ನವೆಂಬರ್ ವೇಳೆಗೆ ಸಂಪುಟ ಪುನರಚನೆ ಮಾಡಿದರೆ, ಇದು ಮುಂಬರುವ ಐದು ಪಾಲಿಕೆಗಳು ಮತ್ತು ಜಿಲ್ಲಾ/ತಾಲ್ಲೂಕು ಚುನಾವಣೆಗೆ ಹೊಸ ಶಕ್ತಿ ನೀಡುವದು ಮತ್ತು ಆಡಳಿತ ವಿರೋಧಿ ಅಲೆಯನ್ನು ತಗ್ಗಿಸಲು ಸಹಾಯಮಾಡುವದು ಅಂತ ಮೂಲಗಳು ಸೂಚಿಸುತ್ತಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡ ಸಂಪುಟ ಪುನರಚನೆ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದನ್ನ ಬೆಂಬಲಿಸಿದ್ದಾರೆ. ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳಿಗೆ ಆಯೋಜಿಸಿದ ಭೋಜನ ಕೂಟದಲ್ಲಿ, ಸಿದ್ದರಾಮಯ್ಯ ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೋ ಎಂಬ ಮಾಹಿತಿಯೂ ಲಭ್ಯವಾಗಿದೆ.

ಆದರೆ, ಹೈಕಮಾಂಡ್ ಸಿಎಂ ಸ್ಥಾನದಲ್ಲಿ ಬದಲಾವಣೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆಯೇ, ಅಥವಾ ಸಿದ್ದರಾಮಯ್ಯ ಅವರಿಗೆ ಮುಂದುವರಿಯಲು ಅವಕಾಶ ನೀಡುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ವರದಿ : ಲಾವಣ್ಯಾ ಅನಿಗೋಳ

- Advertisement -

Latest Posts

Don't Miss