ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಮೀನುಗಾರಿಕೆಗೂ ನಿಷೇಧ ಹೇರಿದ ಸ್ಥಳೀಯ ಅಧಿಕಾರಿಗಳು, ಎಚ್ಚರವಹಿಸುವಂತೆ ಆಂಧ್ರದ ಕರಾವಳಿ ಪ್ರದೇಶದ ಜನರಿಗೆ ಸೂಚನೆ ನೀಡಿದ್ದಾರೆ.
ಕರ್ನಾಟದಲ್ಲಿ ಇಂದು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಈ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡದಲ್ಲಿ 30-40 ಕೀಮೀ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಕೊಡಗು, ಕೋಲಾರ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದ್ದು, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ತುಮಕೂರು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯ ನಿರೀಕ್ಷೆ ಇದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದಿಂದ ಒಡಿಶಾ ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಮುಂಜಾಗ್ರತೆಯಿಂದ ಪ್ರಕಟಿಸುತ್ತಿವೆ.
ಅಕ್ಟೋಬರ್ 27 ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲೂ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆ ಇದೆ. ಮೀನುಗಾರರನ್ನು ಅಕ್ಟೋಬರ್ 26 ರಿಂದ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಪರಿಹಾರ ಕೇಂದ್ರಗಳಿಗೆ ಅಗತ್ಯ ಆಹಾರ ಸಾಮಾಗ್ರಿ ಪೂರೈಸಲಾಗಿದೆ.
ವರದಿ : ಲಾವಣ್ಯ ಅನಿಗೋಳ

