ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ ‘ಲಕ್ಷ ಕಂಠ ಗೀತೋತ್ಸವ’ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ.
ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ನಿರೀಕ್ಷೆ ಇದೆ. ಪೊಡವಿಯೊಡೆಯ ಶ್ರೀಕೃಷ್ಣನ ದರ್ಶನ ಮಾಡಿದ ಬಳಿಕ ಪ್ರಸಾದ ಸ್ವೀಕರಿಸಲಿದ್ದು, ನಂತರ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವದಲ್ಲಿ ಪಾಲ್ಗೊಳ್ಳುವರು.
ಇದು ಪ್ರಧಾನಿಯಾಗಿ ನರೇಂದ್ರ ಮೋದಿಯವರ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ ಆಗಿದ್ದು, ಒಟ್ಟಾರೆ ಅವರ ಎರಡನೇ ಭಾರಿಯ ದರ್ಶನವಾಗಿದೆ. ಇತ್ತೀಚಿಗೆ 2008ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ವೇಳೆ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಆಸಮಯದಲ್ಲೂ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೇ ಸ್ವಾಗತ ಮತ್ತು ಪೂಜಾ ವಿಧಿಗಳನ್ನು ನೆರವೇರಿಸಿದ್ದರು.
ಇದೀಗ ಪ್ರಧಾನಿ ಮೋದಿ ಆಡಳಿತ ಕಾರ್ಯಗಳ ಜೊತೆಗೆ ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಬಿಹಾರದ ಬೇಗೂಸರಾಯಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆರ್ ಜೆ ಡಿ ಸೇರಿ ಮಹಾಘಟಬಂಧನ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಬಿಹಾರದಲ್ಲಿ ಇಷ್ಟು ಬೆಳಕಿದೆ.
ಈ ಲಾಟೀನ್ ಮತ್ತವರ ಜೊತೆಗಾರರ ಆಡಳಿತ ಬೇಕಾ? ಜಂಗಲ್ ರಾಜ್ ನಾಯಕರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಕಳೆದ ಎರಡು ದಶಕಗಳಲ್ಲಿ ಆರ್‌ಜೆಡಿ ಚುನಾವಣೆಯನ್ನು ಗೆದ್ದಿಲ್ಲಕಾರಣ ತನ್ನ ದುರಹಂಕಾರದ ನಡುವೆ ಸಿಕ್ಕಿಕೊಂಡಿದೆ ಎಂದು ಮೋದಿ ಹೇಳಿದ್ದರು.
ವರದಿ : ಲಾವಣ್ಯ ಅನಿಗೋಳ

