Thursday, October 30, 2025

Latest Posts

ಒಳಮೀಸಲಾತಿ ಕಿಚ್ಚಿಗೆ ಸಿದ್ದು ಮುಲಾಮೇನು?

- Advertisement -

ಒಳ ಮೀಸಲಾತಿ ಅನುಷ್ಠಾನ ಸಂಬಂಧ ನೂತನ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ. ಒಳ ಮೀಸಲಾತಿ ಅನುಷ್ಠಾನಕ್ಕಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ, ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಚಿವರಾದ ಜಿ.ಪರಮೇಶ್ವರ್‌, ಕೆ.ಹೆಚ್‌.ಮುನಿಯಪ್ಪ, ಶಿವರಾಜ ತಂಗಡಗಿ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ. ತಿಮ್ಮಾಪೂರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಭಾಗಿಯಾಗಿದ್ರು.

ಒಳಮೀಸಲಾತಿಗೆ ಸಂಬಂಧಿಸಿದ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ರೋಸ್ಟರ್‌ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿ ಪಡಿಸಬೇಕೆಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಾತಿ ಪ್ರಮಾಣಪತ್ರ ನೀಡುವ ಕುರಿತು ಬಿಡುಗಡೆ ಮಾಡಲಾಗಿರುವ ಮಾರ್ಗಸೂಚಿ ಪಾಲಿಸಬೇಕು. ನೇಮಕಾತಿಗೆ ಸಂಬಂಧಿಸಿದ ನಿರ್ಬಂಧ ತೆರವುಗೊಂಡಿದ್ದು, ಪ್ರಕ್ರಿಯೆಯೂ ಆರಂಭವಾಗಿದೆ. ಅದರಲ್ಲಿ ಒಳಮೀಸಲಾತಿ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳಿ. ಸೂಕ್ತ ಪ್ರಾತಿನಿಧ್ಯ ಒದಗಿಸಲು ಕಾನೂನಿನ ಅವಶ್ಯಕತೆಯಿದೆ. ಅದಕ್ಕಾಗಿ ಕರಡು ಮಸೂದೆ ಸಿದ್ಧಪಡಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ನಿರ್ದೇಶಿಸಲಾಗಿದೆ.

ಸಿಎಂ ನೇತೃತ್ವದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌, ಕಳೆದ ಆಗಸ್ಟ್‌ 25ರಂದು ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದಂತೆ, ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಒಳ ಮೀಸಲಾತಿ ಸಮರ್ಪಕ ಅನುಷ್ಠಾನಕ್ಕಾಗಿ ಕಾಯ್ದೆ ಮಾಡಬೇಕಿದೆ. ಅದರ ಕರಡು ಮಸೂದೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸಿಎಂ ಸೂಚಿಸಿದ್ದಾರೆ ಎಂದರು.

ಒಳ ಮೀಸಲಾತಿ ಕುರಿತು ಅಸಮಾಧಾನವಿರುವ ಅಲೆಮಾರಿ ಸಮುದಾಯಗಳೊಂದಿಗೆ ಅಕ್ಟೋಬರ್‌ 31ರಂದು ಸಭೆ ಮಾಡಲು ನಿರ್ಧರಿಸಲಾಗಿದೆ. ಸುಪ್ರೀಂಕೋರ್ಟ್‌ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಲಾಗುತ್ತಿದೆ. ಅದರ ಸಮರ್ಪಕ ಅನುಷ್ಠಾನಕ್ಕಾಗಿ ಕಾಯ್ದೆ ಮಾಡಬೇಕಿದೆ. ಅದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಇಲಾಖೆಗಳ ಜತೆಗೆ ಈಗಾಗಲೇ ಚರ್ಚಿಸಲಾಗಿದೆ. ಒಳ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದಾಗಿ ಎಂದು ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

- Advertisement -

Latest Posts

Don't Miss