ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.


ಅಲ್ಲದೇ, ಕರೋನಾ ಸೋಂಕಿತರು ಬೆಡ್ ಗಳಿಲ್ಲದೆ, ಅಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕರೋನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು? ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ ಎಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.
ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ. ಪತ್ರಿಕಾಗೋಷ್ಠಿ ಕರೆಯದೆ “ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ” ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಗೌರಿ ಗಣೇಶ ಹಬ್ಬಕ್ಕೆ ಟ್ವೀಟ್ ಮೂಲಕ ಕುಮಾರಸ್ವಾಮಿ ಶುಭಕೋರಿದ್ದು, ಕೊರೋನಾ ಸೋಂಕು, ಅತಿವೃಷ್ಟಿಯಂತಹ ವಿಪತ್ತುಗಳು ನಿವಾರಣೆಯಾಗಿ ಎಲ್ಲರ ಬದುಕಲ್ಲಿ ಶಾಂತಿ, ಸಂತೃಪ್ತಿ ಮತ್ತು ಸಮೃದ್ಧಿ ನೆಲೆಗೊಳ್ಳಲಿ. ನಾಡಿನ ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭ ಕಾಮನೆಗಳು. ಈ ಬಾರಿ ಸರಳವಾಗಿ ಗಣೇಶೋತ್ಸವವನ್ನು ಆಚರಿಸೋಣ. ವಿಘ್ನ ನಿವಾರಕ ಗಣೇಶ ನಿಮ್ಮೆಲ್ಲರ ಅಭಿಲಾಷೆ ಈಡೇರಿಸಲಿ ಎಂದು ಶುಭಕೋರಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



