2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು, ಸಚಿವ ಜಮೀರ್ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಒಂದೇ ಒಂದು ಹಕ್ಕುಪತ್ರ ಕೊಟ್ಟಿಲ್ಲ.
ರಾಜ್ಯದಲ್ಲಿ ಸರ್ವೆ ನಡೆಸಿ 54,690 ಹಕ್ಕು ಪತ್ರಗಳನ್ನು ಎಲ್ಲಾ ರಾಜ್ಯದ ಎಲ್ಲಾ ತಾಲೂಕಿನಲ್ಲಿಯೂ ನೀಡಲು, ನಮ್ಮ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಾಂಕೇತಿಕವಾಗಿ ಇಂದು ಬಾಗೇಪಲ್ಲಿಯಲ್ಲಿ 554 ಹಕ್ಕುಪತ್ರಗಳನ್ನು ಅರ್ಹಫಲಾನುಭವಿಗಳಿಗೆ ವಿತರಿಸಲಾಗಿದೆ.
ವೋಟು ನೀಡಿರುವ ಕ್ಷೇತ್ರದ ಜನರ ಋಣ ತೀರಿಸುವಂತಹ ಕೆಲಸದಲ್ಲಿ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಿರತರಾಗಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಸುಬ್ಬಾರೆಡ್ಡಿಗೆ ಮಂತ್ರಿ ಸ್ಥಾನ ಸಿಗುವುದಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ 43,354 ಮನೆ ನೀಡುವ ಮೂಲಕ 6ನೇ ಗ್ಯಾರೆಂಟಿಯಾಗಿ ಘೋಷಣೆ ಮಾಡಲಾಗುವುದು. ಮುಂದಿನ ವರ್ಷ ಹಂತ ಹಂತವಾಗಿ ಬಾಗೇಪಲ್ಲಿಗೆ 5 ಸಾವಿರ ಮನೆ ನೀಡಲಾಗುವುದು ಎಂದು, ಬಾಗೇಪಲ್ಲಿ ಕಾರ್ಯಕ್ರಮದಲ್ಲಿ ಜಮೀರ್ ಅಹಮದ್ ಹೇಳಿದ್ದಾರೆ.

