Political News: ಮೇ ತಿಂಗಳಲ್ಲಿ ಶುರುವಾಗಿರುವ ಮಳೆ ಇನ್ನೂವರೆಗೂ ನಿಲ್ಲುವಂತೆ ಕಾಣುತ್ತಿಲ್ಲ. ಹೀಗಾಗಿ ಹಲವೆಡೆ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರ ಪರ ಸೋಶಿಯಲ್ ಮೀಡಿಯಾದಲ್ಲಿ ಬ್ಯಾಟ್ ಬೀಸಿದ್ದಾರೆ.
ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು ಕಳೆದರೂ ಕೂಡ ರಾಜ್ಯ ಸರ್ಕಾರ ಪರಿಹಾರ ಕೊಡಲು ಮುಂದೆ ಬಂದಿಲ್ಲ. ಸರ್ವೆ ಕಾರ್ಯ ಸಮರ್ಪಕವಾಗಿ ಆಗಿಲ್ಲ. ಹೀಗಾಗಿ ರೈತರ ಬಾಳು ಕಂಗೆಟ್ಟಿದೆ ಪರಿಹಾರಕ್ಕಾಗಿ ರೈತರು ಚಾತಕ ಪಕ್ಷಿಯಂತೆ ಸರ್ಕಾರದ ಕಡೆ ನೋಡುತ್ತಿದ್ದಾರೆ. ಕಳೆದ ವರ್ಷವೂ ಯಾವುದೇ ಪರಿಹಾರ ನೀಡಿಲ್ಲ ಕೆಂದ್ರದ ಪರಿಹಾರ ಕೊಟ್ಟು ಕೈ ತೊಳೆದುಕೊಂಡರು. ಈ ವರ್ಷ ಮೊತ್ತ ಘೋಷಣೆ ಮಾಡಿ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿಸುತ್ತಿದೆ. ಎಲ್ಲ ರೈತರಿಗೂ ಸೂಕ್ತ ಪರಿಹಾರ ನೀಡಲು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಗೋವಿನ ಜೋಳ, ಸೋಯಾ, ಹೆಸರು ಎಲ್ಲ ಬೆಲೆ ಕುಸಿದಿದೆ ಅದಕ್ಕೆ ಬೆಂಬಲ ಬೆಲೆ ದರದಲ್ಲಿ ಗೋವಿನ ಜೋಳ ಸೋಯಾ ಖರೀದಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಗೋವಿನ ಜೋಳದ ಬೆಲೆ 2500 ಇದ್ದ ದರ 1500 ರೂ. ಗೆ ಇಳಿದಿದೆ ಕೂಡಲೆ ಬೆಂಬಲ ಬೆಲೆ ಅನುದಾನ ಬಿಡುಗಡೆ ಮಾಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.
ರಾಜ್ಯದ ಕಬ್ಬು ಬೆಳೆಗಾರ ರೈತರು ನ್ಯಾಯ ಸಮ್ಮತ ಬೆಲೆ ಘೊಷಣೆಗೆ ಸಕ್ಕರೆ ಕಾರ್ಖಾನೆಯಿಂದ ಬಯಸಿ ಬಾಗಲಕೋಟೆ ಬೆಳಗಾವಿ, ಬಿಜಾಪುರದ ರೈತರು ಧರಣಿ ಮಾಡುತ್ತಿದ್ದು ಕಾರ್ಖಾನೆಯವರು ಸ್ಮಂದಿಸುತ್ತಿಲ್ಲ. ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಿ ರೈತರು ಬೇಡಿರುವ 3500 ರೂ. ದರ ನಿಗದಿ ಮಾಡಿ ಕಾರ್ಖಾನೆಗಳಿಂದ ಘೊಷಣೆ ಮಾಡಿ ಕಬ್ಬು ಅರಗಿಸುವ ಕೆಲಸ ಆರಂಭಿಸಬೇಕು. ಮೇಲೆ ಕಾಣಿಸಿದ ಮೂರು ಕ್ರಮ ಕೈಗೊಳ್ಳದಿದ್ದರೆ ರೈತರು ಸಂಕಷ್ಟಕ್ಕೆ ಈಡಾಗುತ್ತಾರೆ. ರೈತರ ಪರ ಸರ್ಕಾರ ಎಂದು ಹೇಳಿ ಏನೂ ಮಾಡದಿದ್ದರೆ ದೊಡ್ಡ ಪ್ರಮಾಣದ ರೈತರ ಚಳುವಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲು ಬಯಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದಿದ್ದಾರೆ.
ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು ಕಳೆದರೂ ಕೂಡ ರಾಜ್ಯ ಸರ್ಕಾರ ಪರಿಹಾರ ಕೊಡಲು ಮುಂದೆ ಬಂದಿಲ್ಲ. ಸರ್ವೆ ಕಾರ್ಯ ಸಮರ್ಪಕವಾಗಿ ಆಗಿಲ್ಲ. ಹೀಗಾಗಿ ರೈತರ ಬಾಳು ಕಂಗೆಟ್ಟಿದೆ ಪರಿಹಾರಕ್ಕಾಗಿ ರೈತರು ಚಾತಕ ಪಕ್ಷಿಯಂತೆ ಸರ್ಕಾರದ ಕಡೆ ನೋಡುತ್ತಿದ್ದಾರೆ. ಕಳೆದ…
— Basavaraj S Bommai (@BSBommai) October 31, 2025

