‘ನನ್ನನ್ನೂ ಕೂಡ ಅವರ ಮಗನಂತೆ ನೋಡಿದ್ದರು. ಅವರ ಸಾವಿನ ಸುದ್ದಿ ಕೇಳಿ ಕಣ್ಣೀರು ಬಂತು’

ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. ರಾಜ್ಯದಲ್ಲಿ ಜೀವಜಲ ಸದಾ ತುಂಬಿರಲಿ, ಮಳೆ ಬೆಳೆಗಳು ಸಮೃದ್ಧವಾಗಿರಲಿ, ನಾಡು ಹಸಿರಾಗಿದ್ದು, ರೈತರ ಬಾಳು ಸದಾ ಹಸನಾಗಿರಲಿ ಎನ್ನುವುದೇ ನಮ್ಮ ಪ್ರಾರ್ಥನೆ ಎಂದಿದ್ದಾರೆ.

ಮತ್ತೆ ರಾಜ್ಯಸರ್ಕಾರದ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ. ಮುಂಗಾರು ಶುರುವಾದಾಗಲೇ ರೈತರಿಗೆ ಬೀಜ,ಗೊಬ್ಬರ‌‌ ಕೊರತೆಯಾಗದಂತೆ ದಾಸ್ತಾನಿಗೆ ವ್ಯವಸ್ಥೆ ಮಾಡಿ ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದೆ. ನಿರೀಕ್ಷೆಯಂತೆಯೇ ಸರ್ಕಾರದ ವೈಫಲ್ಯದ ಫಲವನ್ನು ರೈತರು ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಗಮನ ಹರಿಸಿ ರಸಗೊಬ್ಬರ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

ಸಚಿವ ಶ್ರೀರಾಮುಲು ಅವರ ಅಮ್ಮ ಕೊರೊನಾದಿಂದ ಬಳಲಿ ನಿಧನರಾಗಿದ್ದು, ಈ ಬಗ್ಗೆ ಗಾಲಿ ಜನಾರ್ಧನ ರೆಡ್ಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಬಿ. ಹೊನ್ನೂರಮ್ಮ(೯೦) ಅವರು ನಿನ್ನೆ ರಾತ್ರಿ ೧೧:೩೦ಕ್ಕೆ ವಿಧಿವಶರಾದರು ಎಂದು ತಿಳಿಸಲು ವಿಷಾಧಿಸುತ್ತೇನೆ. ತಾಯಿ ಹೊನ್ನೂರಮ್ಮ ಅವರು ಶ್ರೀರಾಮುಲು ಹಾಗೂ ನನ್ನನ್ನು ಇಬ್ಬರನ್ನು ತನ್ನ ಮಕ್ಕಳ ಹಾಗೆ ನೋಡಿಕೊಂಡಿದ್ದರು. ನಾವು ಇಬ್ಬರು ಬಾಲ್ಯ ಸ್ನೇಹಿತರಾದ ಕಾರಣ ನಾನು ಕಂಡಂತೆ ನನಗೆ ಅವರು ಶ್ರೀರಾಮುಲುಗಿಂತಲೂ ಹೆಚ್ಚಿನ ಪ್ರೀತಿಯನ್ನು ಕೊಟ್ಟು ಬೆಳೆಸಿದ್ದರು. ಆದರೆ ನಮ್ಮನ್ನು ಬೆಳೆಸಿದ ತಾಯಿ ಇಂದು ಇಹಲೋಕ ತ್ಯಜಿಸಿದರು ಎಂಬ ಸುದ್ದಿಯನ್ನು ಕೇಳಿ, ಮಾತು ಬಾರದಾಗಿ, ದು:ಖ ತಡೆಯಲಾಗುತ್ತಿಲ್ಲ ಕಣ್ಣಂಚಿನಿಂದ ನೀರು ತಾನಷ್ಟಕ್ಕೆ ತಾನೆ ಹರಿಯುತ್ತಿದೆ. ಈ ವಿಷಯ ಕೇಳಿ ಇಡಿ ನಮ್ಮ ಕುಟುಂಬದಲ್ಲಿ ದು:ಖ ಆವರಿಸಿದೆ ಎಂದು ರೆಡ್ಡಿ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 30 ಲಕ್ಷದತ್ತ ಸಮೀಪಿಸಿದೆ. ಗುರುವಾರದಂದು ದೇಶದಲ್ಲಿ 68,898 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ, 29,05,823ಕ್ಕೇರಿದೆ. ಅಲ್ಲದೇ, ಗುರುವಾರ 983 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, 54,849 ಮಂದಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇನ್ನು ಸಮಾಧಾನದ ಸಂಗತಿ ಅಂದ್ರೆ ದೇಶದಲ್ಲಿ ಒಟ್ಟು 21, 58, 946 ಮಂದಿ ಗುಣಮುಖರಾಗಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author