Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ“ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು.
ಇಷ್ಟಾದರೂ ಸಮಸ್ಯೆ ಬಗೆಹರಿಯದ ಕಾರಣ, ಮನನ“ಂದು ಮಂಜೇಗೌಡ ಇಂದು ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ತಕ್ಷಣ ಅಲ್ಲೇ ಇದ್ದ ಜನ ಬೆಂಕಿ ಆರಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗದ ಕಾರಣ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಂಜೇಗೌಡ ಸಾವನ್ನಪ್ಪಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

