ನವೆಂಬರ್‌ನಲ್ಲಿ ದಿನಗಳು ಕಳೆದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟದ ಸುಳಿವು ಸಿಗುತ್ತಿದೆ. ನವೆಂಬರ್ 15ರ ಬಳಿಕ ಹೊಸ ಆಟದ ಸಂದೇಶವನ್ನು, ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ರವಾನಿಸಿದ್ದರು. ಮತ್ತೆ ಕೋಲಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಸಂಪುಟ ಪುನಾರಚನೆ ವೇಳೆ ನೋಡೋಣ ಎಂದು ಹೇಳಿದ್ದಾರೆ. ನಾಲ್ಕು ಮಂದಿ ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ.
ಇದೇ ವೇಳೆ ಎತ್ತಿನಹೊಳೆ ಯೋಜನೆ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ. ತಡ ಆಗುವುದಿಲ್ಲ. ನಿಗದಿಯಂತೆ ಯೋಜನೆ ಪೂರ್ಣಗೊಳಿಸುತ್ತೇವೆ. ಅನುದಾನ ಬಿಡುಗಡೆ ಕುರಿತು ಜೆಡಿಎಸ್ ಶಾಸಕರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ವೇಳೆ ಎಷ್ಟು ಅನುದಾನ ಕೊಟ್ಟಿದ್ರು. ಆಗ ರಮೇಶ್ ಕುಮಾರ್ ಎಂಎಲ್‌ಎ ಇದ್ರು. ಶ್ರೀನಿವಾಸಪುರಕ್ಕೆ ಎಷ್ಟು ಅನುದಾನ ಸಿಕ್ಕಿತ್ತು ಎಂದು ತಿರುಗೇಟು ಕೊಟ್ಟಿದ್ದಾರೆ.

