Friday, November 28, 2025

Latest Posts

ವಿಷ ಕುಡಿದು ಪ್ರಾಣ ಬಿಟ್ಟ ಮಂಡ್ಯದ ಮತ್ತೋರ್ವ ರೈತ

- Advertisement -

ಮಂಡ್ಯ: ಜಿಲ್ಲೆಯಲ್ಲಿ ಸಾಲಬಾಧೆ ಮತ್ತೊಮ್ಮೆ ರೈತರ ಜೀವ ತೆಗೆಯಿತು. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ 55 ವರ್ಷದ ರಾಮಲಿಂಗ ಅವರು ಕೃಷಿ ಸಾಲದ ಒತ್ತಡಕ್ಕೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2 ಎಕರೆ ಜಮೀನು ಹೊಂದಿದ್ದ ರಾಮಲಿಂಗ ಅವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಈ ದುರಂತ ಹೆಜ್ಜೆ ಇಟ್ಟಿದ್ದಾರೆ. ತಕ್ಷಣ ಮಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಮಂಡ್ಯದಲ್ಲೇ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿರಂತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ರೈತರ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಎಲ್ಲೆಡೆ ಕೇಳಿಬರುತ್ತಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss