- Advertisement -
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು.

ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅದ್ದೂರಿ ಮೆರವಣಿಗೆಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಚಾಲನೆ ನೀಡಿದ್ರು. ಬೃಹತ್ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಕುಂಭ ಹೊತ್ತು ಹೆಜ್ಜೆ ಹಾಕಿದ್ರು.
ಡೊಳ್ಳು ಕುಣಿತ, ಗೊಂಬ್ಬೆ ನೃತ್ಯ ನೋಡುಗರ ಕಣ್ಣಿಗೆ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ರಥದಲ್ಲಿ ಕನಕದಾಸರ ಭಾವಚಿತ್ರ ಇಟ್ಟು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯ್ತು.
- Advertisement -

