Thursday, November 13, 2025

Latest Posts

I20 ಕಾರಿನಲ್ಲಿ ಆ 3 ಗಂಟೆ ದಿಲ್ಲಿ ಬಾಂಬರ್‌ ಮಾಡಿದ್ದೇನು?

- Advertisement -

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹತ್ವದ ಸುಳಿವು ದೊರೆತಿದೆ. ದೆಹಲಿ ಸ್ಫೋಟ ಪ್ರಕರಣದಲ್ಲಿ ಸೂಸೈಡ್ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್‌ನ, ಮೊದಲ ಫೋಟೋ ಬಿಡುಗಡೆಯಾಗಿದೆ.

1989ರ ಫೆಬ್ರವರಿ 24ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ ಉಮರ್ ಮೊಹಮ್ಮದ್‌, ಆಲ್ ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಜಮ್ಮು ಕಾಶ್ಮೀರ ಹಾಗೂ ಹರಿಯಾಣ ಪೊಲೀಸ್ ತಂಡಗಳು ಭೇದಿಸಿದ್ದ ವೈಟ್ ಕಾಲರ್ ಭಯೋತ್ಪಾದನಾ ಜಾಲದ ಪ್ರಮುಖ ಸದಸ್ಯರಾದ ಡಾ.ಆದೀಲ್ ಅಹ್ಮದ್ ರಾಥರ್ ಮತ್ತು ಡಾ. ಮುಜಮ್ಮಿಲ್ ಶಕೀಲ್ ಅವರ ಆಪ್ತ ಸಹಾಯಕನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ತನಿಖಾಧಿಕಾರಿಗಳು ಈ ಜಾಲದ ಇಬ್ಬರು ಪ್ರಮುಖ ಸದಸ್ಯರನ್ನು ಬಂಧಿಸಿದ್ರು. ಕಳೆದ ಕೆಲವು ದಿನಗಳಲ್ಲಿ 2,900 ಕೆಜಿಗೂ ಹೆಚ್ಚು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದ ತಕ್ಷಣ ಉಮರ್ ಆತಂಕ್ಕೀಡಾಗಿದ್ದ. ಬಳಿಕ ಫರಿದಾಬಾದ್‌ನಿಂದ ತಪ್ಪಿಸಿಕೊಂಡಿದ್ದ. ವರದಿಯ ಪ್ರಕಾರ, ಈತನೇ ಸ್ಫೋಟಕ್ಕೆ ಕಾರಣನಾಗಿದ್ದಾನೆ.

ಉಮರ್ ಮೊಹಮ್ಮದ್ ಮತ್ತು ಆತನ ಸಹಚರರು ದಾಳಿ ನಡೆಸಲು, ಅಮೋನಿಯಂ ನೈಟ್ರೇಟ್ ಫ್ಯುಯೆಲ್ ಆಯಿಲ್ ಅನ್ನು ಬಳಸಿದ್ದಾರೆ. ಅವರು ಕಾರಿನಲ್ಲಿ ಡಿಟೋನೇಟರ್ ಇರಿಸಿ, ಕೆಂಪು ಕೋಟೆಯ ಸಮೀಪದ ಜನನಿಬಿಡ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಸಿಸಿಟಿವಿ ವಿಡಿಯೋ ಮತ್ತು ಚಿತ್ರಗಳ ಪ್ರಕಾರ, ಕೆಂಪು ಕೋಟೆ ಬಳಿ ಸ್ಫೋಟಗೊಂಡ ಬಿಳಿ ಹ್ಯುಂಡೈ ಐ20 ಕಾರು, ಬಾದರ್‌ಪುರ ಗಡಿಯ ಮೂಲಕ ದೆಹಲಿಗೆ ಪ್ರವೇಶಿಸಿ, ಹೊರ ವರ್ತುಲ ರಸ್ತೆಯ ಮೂಲಕ ಹಳೆ ದೆಹಲಿಗೆ ಬಂದಿದೆ. ಮೂಲಗಳ ಪ್ರಕಾರ, HR 26CE7674 ನಂಬರ್ ಪ್ಲೇಟ್ ಹೊಂದಿದ್ದ.

ಈ ವಾಹನವನ್ನು ಮಧ್ಯಾಹ್ನ 3:19ಕ್ಕೆ ಕೆಂಪು ಕೋಟೆಯ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಸಂಜೆ ಸುಮಾರು 6:30ರ ಸುಮಾರಿಗೆ ಆತ್ಮಾಹುತಿ ಬಾಂಬರ್‌ ಅಲ್ಲಿಂದ ಕಾರನ್ನು ಹೊರ ತೆಗೆದಿದ್ದಾನೆ. ಈ ಮೂರು ಗಂಟೆಗಳಿಗೂ ಹೆಚ್ಚು ಕಾಲ ಶಂಕಿತ ಬಾಂಬರ್ ಒಂದು ನಿಮಿಷವೂ ಕಾರಿನಿಂದ ಹೊರ ಬಂದಿರಲಿಲ್ಲ.

ಪ್ರಾರಂಭಿಕ ತನಿಖೆಯ ಪ್ರಕಾರ, ದಾಳಿಗೆ ಬಳಸಿದ ಕಾರನ್ನು ಒಬ್ಬರಿಂದ ಒಬ್ಬರಿಗೆ ಬದಲಿಸಲಾಗಿದೆ. ಮೂಲಗಳ ಪ್ರಕಾರ ಮಾರ್ಚ್ 2025ರಲ್ಲಿ ಸಲ್ಮಾನ್ ಎಂಬಾತನಿಂದ ದೇವಿಂದರ್ ಎಂಬಾತನಿಗೆ ಕಾರು ಮಾರಾಟವಾಗಿತ್ತು. ನಂತರ, ಅಕ್ಟೋಬರ್ 29ರಂದು ದೇವಿಂದರ್‌ನಿಂದ ಅಮೀರ್‌ಗೆ, ತದನಂತರ ತಾರಿಖ್ ಮತ್ತು ಉಮರ್‌ಗೆ ಹಸ್ತಾಂತರಗೊಂಡಿತ್ತು. ಅಮೀರ್ ಮತ್ತು ತಾರಿಖ್ ಇಬ್ಬರನ್ನೂ ದೆಹಲಿ ಪೊಲೀಸ್ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಮೀರ್, ಡಾ. ಉಮರ್ ಮೊಹಮ್ಮದ್‌ನ ಸಹೋದರನಾಗಿದ್ದಾನೆ.

- Advertisement -

Latest Posts

Don't Miss