ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು.
ಶಿಕ್ಷಣ ಪ್ರೇಮಿ ಯುವಕರ ಸ್ಪೂರ್ತಿ ಜಿ.ಬಿ ವಿನಯಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಒಂದು ಸಾವಿರ ಮೀಟರ್ ಕನ್ನಡ ಬಾವುಟ ಯಾತ್ರೆಗೆ ಚಾಲನೆ ನೀಡಿದ್ದಾರೆ. ಬೇರೆ ರಾಜ್ಯದ ಜಿಲ್ಲೆಗಳಿಂದ ಆಗಮಿಸಿ ರಾಜ್ಯ ಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ ಪಡೆದಿರುವ ಸಾಧಕರಿಗೆ, ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ, ಮಾಧ್ಯಮ ಮಿತ್ರರಿಗೆ, ಯಾತ್ರೆಯಲ್ಲಿ ಭಾಗವಹಿಸಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಬೀದರ್ ಜಿಲ್ಲೆಯ ಸಮಸ್ತ ಕನ್ನಡ ಮನಸ್ಸುಗಳಿಗೆ ಧನ್ಯವಾದಗಳನ್ನ ಅರ್ಪಿಸಿದರು.
ನಿಮ್ಮೆಲ್ಲರ ಸಹಕಾರದಿಂದ ನಾಲ್ಕನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭ ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿದೆ. ಇದರ ಯಶಸ್ಸು ಬೀದರ್ ಜಿಲ್ಲೆಯ ಸರ್ವ ಕನ್ನಡಿಗರಿಗೆ ಸಮರ್ಪಿಸುತ್ತೇವೆ. ಮುಂದೆ ಇದೇ ರೀತಿ ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಸಹಕಾರ ಹಾಗೂ ಮಾರ್ಗದರ್ಶನ ಸದಾ ಇರಲಿ ಅಂತ ಕನ್ನಡದ ಸೇವಕ ಹಣ್ಮು ಪಾಜಿ ಹೇಳಿದ್ದಾರೆ.
ವರದಿ : ಲಾವಣ್ಯ ಅನಿಗೋಳ




