ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ.
ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು ತಾನು ಮತ್ತು ಉಮರ್ ಕೆಂಪು ಕೋಟೆಯಿಂದ ಹಿಂದಿರುಗಿ ಬಂದಿದ್ದೆವು. ಮೊದಲು ಕೆಂಪುಕೋಟೆಯನ್ನು ಗುರಿಯಾಗಿಸಿ ದಾಳಿ ಮಾಡುವ ಯೋಜನೆಯಿತ್ತು. ಹಾಗಾಗಿ ಹಲವು ಬಾರಿ ಕೆಂಪು ಕೋಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡಿದ್ದರಂತೆ.
ಈ ದೀಪಾವಳಿಯಂದು ಜನದಟ್ಟಣೆ ಇರುವ ಸ್ಥಳದ ಮೇಲೆ ದಾಳಿ ಮಾಡುವ ಯೋಜನೆಯಿತ್ತಂತೆ. ಆದರೆ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಫರಿದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಮುಜಮ್ಮಿಲ್ ಅವರ ಸಹಾಯಕ ಮತ್ತು ಸಹೋದ್ಯೋಗಿ ಉಮರ್, ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ ಬಳಿ, ಕಾರು ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
ಈಗ ಎನ್ಐಎ ತಂಡವು ಇದರ ಹಿಂದೆ ಪಾಕಿಸ್ತಾನ ಅಥವಾ ಬೇರೆ ಯಾರಾದರೂ ಇದ್ದಾರೆಯೇ ಎಂದು ಕಂಡುಹಿಡಿಯಲು ಪ್ರತಿಯೊಂದು ಅಂಶವನ್ನು ಪರಿಶೀಲಿಸುತ್ತಿದೆ.
ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಭಯೋತ್ಪಾದಕ ಡಾ. ಮೊಹಮ್ಮದ್ ಉಮರ್, ಬಂಧನಕ್ಕೆ ಹೆದರಿದ್ದಾನೆ. ಈ ಯೋಜನೆ ರೂಪಿಸಿ ಕೆಂಪು ಕೋಟೆ ಬಳಿ ಸ್ಫೋಟ ನಡೆಸಿದ್ದಾನೆ. ಅತ್ಯಂತ ಆಶ್ಚರ್ಯಕರ ವಿಷಯವೆಂದರೆ, ಘಟನೆ ನಡೆದ 24 ಗಂಟೆಗಳ ನಂತರವೂ ಯಾವುದೇ ಭಯೋತ್ಪಾದಕ ಸಂಘಟನೆಯು ಇದರ ಹೊಣೆಯನ್ನು ಹೊತ್ತುಕೊಂಡಿಲ್ಲ. ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ನೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಲಾಗುತ್ತಿದೆ.

