Mandya News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಚನ್ನೇಗೌಡ ಎಂಬ ಹೆಸರಿದ್ದರೂ ಕೂಡ, ತಿಥಿ ಸಿನಿಮಾ ಬಂದ ಬಳಿಕ ಇವರು ಗಡ್ಡಪ್ಪ ಅಂತಲೇ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾದ ಇವರು, ತಿಥಿ ಬಳಿಕ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಇತ್ತೀಚೆಗೆ ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪಗೆ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಅಲ್ಲದೇ ಸ್ಥಳೀಯ ಆಸ್ಪತ್ರೆಯಲ್ಲಿ ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಇಂದು ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

