ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್ ಸಿಗುತ್ತಿದ್ದು, ನವೆಂಬರ್ 19ರಂದು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ. ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು, ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಭೇಟಿಯಾಗಿದ್ರು. ಈ ವೇಳೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ನೋಂದಣಿ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.
ಗೃಹಲಕ್ಷ್ಮೀ ಅಡಿಯಲ್ಲಿ 1.24 ಕೋಟಿ ಫಲಾನುಭವಿಗಳು ಯೋಜನೆಯಿಂದ ದೊರೆತ ಹಣವನ್ನು, ಬೇರೆ ಮೂಲಗಳಲ್ಲಿ ತೊಡಗಿಸಿ ಆದಾಯ ಪಡೆಯುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗುತ್ತಿದೆ. ಸಂಘದ ಮೂಲಕ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರೂವರೆಗೆ ಸಾಲ ನೀಡುವುದು ಸೇರಿ, ಮತ್ತಿತರ ಸವಲತ್ತುಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ.
1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.




