ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ KN ರೇಣುಕಯ್ಯ ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಮಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದಾರೆ.
SSLC, PUC ಫಲಿತಾಂಶ ಗಣನೀಯವಾಗಿ ಕಡಿಮೆ ಆಗುತ್ತಿರುವುದನ್ನು ಮನಗಂಡು ಶಾಲಾ ಶಿಕ್ಷಣ ಇಲಾಖೆ ತುಮಕೂರು ಇವರ ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದರಲ್ಲೂ ಕಲಾವಿಭಾಗದ ಅರ್ಥಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗಿದೆ.
ಆದ್ದರಿಂದ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಬದಲಾವಣೆ ಮಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪರೀಕ್ಷೆಗಳನ್ನ ಹೇಗೆ ಎದುರಿಸಬೇಕು? ಉತ್ತಮ ಅಂಕಗಳನ್ನು ಯಾವ ರೀತಿ ಪಡೆಯಬೇಕು? ಫಲಿತಾಂಶ ಹೇಗೆ ಸುಧಾರಿಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಪ್ರತಿ ಶನಿವಾರ ಕಠಿಣ ವಿಷಯಗಳ ತರಗತಿಗಳನ್ನ ತೆಗೆದುಕೊಂಡು ಫಲಿತಾಂಶ ಸುಧಾರಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇದ್ದು ಉತ್ತಮ ಫಲಿತಾಂಶ ದತ್ತ ಗಮನ ಹರಿಸಿದರೆ ಇದು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಇನ್ನು ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

