Tuesday, November 18, 2025

Latest Posts

ಬ್ರೇಕಿಂಗ್: ಸಿದ್ದರಾಮಯ್ಯ ಕುಟುಂಬಕ್ಕೆ ಆತಂಕ, ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು!

- Advertisement -

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್‌ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ ಅಲೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಂಬದಲ್ಲಿ ಆತಂಕಕಾರಿ ಸುದ್ದಿ ಎದುರಾಗಿದೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ಸಂಬಂಧಿತ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಪಾರ್ವತಿ ಅವರನ್ನು ನವೆಂಬರ್ 17 ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಿಂದ ಲಭಿಸಿರುವ ಮಾಹಿತಿಯ ಪ್ರಕಾರ, ತಜ್ಞ ವೈದ್ಯರ ತಂಡ ಅವರ ಚಿಕಿತ್ಸೆಯನ್ನು ಕೈಗೊಂಡಿದೆ.

ಸದ್ಯ ಪತ್ನಿ ಪಾರ್ವತಿ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಡಾ. ಬಿ.ಸಿ. ಶ್ರೀನಿವಾಸ್ ಅವರ ನೇತೃತ್ವದ ವೈದ್ಯರ ತಂಡ ನಿರಂತರ ನಿಗಾದಲ್ಲಿದೆ. ಈ ವೇಳೆ ಪಾರ್ವತಿ ಅವರೊಂದಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಹಾಜರಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿರುವುದರಿಂದ, ಕುಟುಂಬದ ಆರೋಗ್ಯ ಅವಸ್ಥೆಯ ಬಗ್ಗೆ ಅವರಿಗೆ ನಿರಂತರ ಮಾಹಿತಿ ನೀಡಲಾಗುತ್ತಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss