Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ.
ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ, ಡಾ. ಬಿ ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ ಮಾಡಲಾಗಿದೆ. ವಿವಿಧ ಮಠಾಧೀಶರು ತಾಲೂಕು ಕಚೇರಿ ಆವರಣದಲ್ಲಿ ಸ್ತಬ್ಧ ಚಿತ್ರಗಳಿಗೆ ಚಾಲನೆ ನೀಡಿದ್ದು, ದಾರ್ಶನಿಕರ ಭಾವಚಿತ್ರ ವಿರುವ 54 ಸ್ತಬ್ದಚಿತ್ರಗಳು ಗಮನ ಸೆಳೆದಿದೆೆ.
ಬಳಿಕ ವೇದಿಕೆಯಲ್ಲಿ ದೀಪ ಬೆಳಗುವ ಮೂಲಕ ಮಾಜಿ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನದ ಗ್ರಂಥ ಪ್ರತಿಕೃತಿಗೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ದಾರ್ಶನಿಕರ ಗ್ರಂಥ ಬಿಡುಗಡೆ ಮಾಡಲಾಗಿದ್ದು, ಜನರಿಗೆ ಸಂವಿಧಾನ ಪೀಠಿಕೆ ಬೋಧನೆ ಮಾಡಲಾಯಿತು.
ಸಿದ್ದಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರುಗಳು,ಎಲ್ಲಾ ಧರ್ಮ, ಜನಾಂಗದ ಮಠಾಧೀಶರು, ಚಿಂತಕರು, ಸಾಹಿತಿಗಳು, ಭಾಗಿಯಾಗಿದ್ದರು.

