ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಇದ್ದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದರು.
ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಹಕಾರ ನೀಡಿದ್ದನ್ನು ನೆನಪಿಸಿದರು. ಈ ಹಿನ್ನೆಲೆಯಲ್ಲಿ, ಎರಡನೇ ಅವಧಿಗೆ ಸಿಎಂ ಸ್ಥಾನವನ್ನು ಶಿವಕುಮಾರ್ ಅವರಿಗೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಅಧಿಕಾರ ಬಿಟ್ಟು ಕೊಡದಿದ್ದರೆ, ವಚನಭ್ರಷ್ಟ ನಾಯಕನಾಗಿ ಸಿದ್ದರಾಮಯ್ಯ ಜನರ ಮನಸ್ಸಿನಲ್ಲಿ ಉಳಿಯುವ ಸಾಧ್ಯತೆಯಿದೆ ಎಂದು ಸ್ವಾಮೀಜಿ ಎಚ್ಚರಿಸಿದರು. ಸಿದ್ದರಾಮಯ್ಯ ಅವರು ಹಠ ಮತ್ತು ಮೊಂಡುತನ ಬಿಟ್ಟು, ರಾಜಕೀಯ ವಾಗ್ದಾನದಂತೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಹೇಳಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




