Thursday, November 27, 2025

Latest Posts

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

- Advertisement -

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಎಕ್ಸಾಂ ಕಿಟ್ ವಿತರಿಸಲಾಯಿತು.

ಬಳಿಕ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಮಾತನಾಡಿ, ಪ್ರಹ್ಲಾದ್ ಜೋಶಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ದೇವರನ್ನು ಯಾರು ನೋಡಿಲ್ಲ. ಆದರೆ ವಿದ್ಯಾರ್ಥಿಗಳು ಶಿಕ್ಷಕರಲ್ಲಿ ದೇವರನ್ನು ನೋಡಬೇಕು. ಅವರ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು, ತಂದೆತಾಯಿಗಳ ಕನಸನ್ನು ಸಾಕಾರಗೊಳಿಸಬೇಕು ಎಂದಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಸಮಯದ ಮೌಲ್ಯ ಹಾಳು ಮಾಡಿಕೊಳ್ಳದೆ ಶೈಕ್ಷಣಿಕ ಚಟುವಟಿಕೆಗೆ ಮಹತ್ವ ನೀಡಬೇಕು. ಹೆತ್ತ ತಾಯಿ, ತಂದೆ ಹಾಗೂ ಶಿಕ್ಷಣ ಕಲಿಸುವ ಗುರುಗಳಿಗೆ ಗೌರವ ನೀಡಬೇಕು. ಇವತ್ತಿನ ವಿದ್ಯಾರ್ಥಿಗಳು ನಾಳೆಯ ನಾಗರಿಕರು, ಈ ದಿಸೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆಯಿಂದ ಓದಿ IAS, IPS ಅಧಿಕಾರಿಗಳಾಗಬೇಕು ಎಂದು ಹೇಳಿದರು.

ಈಗಾಗಲೇ ಕಲಘಟಗಿ, ಕುಂದಗೋಳ, ನವಲಗುಂದ, ಹುಬ್ಬಳ್ಳಿ – ಧಾರವಾಡ ಸೇರಿದಂತೆ ವಿವಿಧ ಶಾಲೆಗಳಿಗೆ ಸುಮಾರು 18000 ಕ್ಕೂ ಹೆಚ್ಚು ಬ್ಯಾಗ್, ಎಕ್ಸಾಂ ಕಿಟ್ ವಿತರಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳಿಗೆ ನೆರವಾಗುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss