ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ.
ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ವರದಿ ನೀಡುವಂತೆ ಎಚ್ಚರಿಕೆ ನೀಡಿದ್ದಾರೆ.
ಸ್ಥಳಿಯರ ಆರೋಪದ ಪ್ರಕಾರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ದಿನಾಚರಣೆ ಆಚರಿಸದೇ ಅವಮಾನ ಮಾಡಿದ್ದು, ಮೇಲಾಧಿಕಾರಿಗಳು ಪಂಚಾಯ್ತಿ ಅಧಿಕಾರಿ ಹಾಗೂ ಆಡಳಿತ ವ್ಯವಸ್ಥೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

