ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ, ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂದು ಕಿಡಿಕಾರಿದ್ದಾರೆ.
ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂದಿದ್ದಾರೆ.
ಸಂಗೊಳ್ಳಿ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




